ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ
IND vs AUS: ಸಿಕ್ಸರ್ ಸಿಡಿಸಿಯೇ ಕ್ರಿಕೆಟ್ ಜಗತ್ತನ್ನು ಜಯಿಸಿದ ಜೈಸ್ವಾಲ್
ಪರ್ತ್ ಟೆಸ್ಟ್ನ ಎರಡನೇ ದಿನದಾಟ ಮುಕ್ತಾಯಗೊಂಡಿದೆ. ದಿನದಾಟದಂತ್ಯಕ್ಕೆ ಟೀಂ ಇಂಡಿಯಾ ತನ್ನ ಎರಡನೇ ಇನ್ನಿಂಗ್ಸ್‌ನಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ 172 ರನ್ ಗಳಿಸಿದೆ. ಸದ್ಯ ಕೆಎಲ್ ರಾಹುಲ್ 62 ರನ್ ಹಾಗೂ ಯಶಸ್ವಿ ಜೈಸ್ವಾಲ್ 90 ರನ್ ಗಳಿಸಿ ಕ್ರೀಸ್‌ನಲ್ಲಿದ್ದಾರೆ. ಟೀಂ ಇಂಡಿಯಾದ ಒಟ್ಟು ಮುನ್ನಡೆ 218 ರನ್ ಆಗಿದೆ.
ಆಸೀಸ್ ವಿರುದ್ಧದ ಈ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಶೂನ್ಯಕ್ಕೆ ಔಟಾಗಿದ್ದ ಜೈಸ್ವಾಲ್, ಎರಡನೇ ಇನ್ನಿಂಗ್ಸ್‌ನಲ್ಲಿ ಅಜೇಯ 90 ರನ್ ಬಾರಿಸಿದ್ದಾರೆ. ಜೈಸ್ವಾಲ್ ಅವರ ಈ ಇನ್ನಿಂಗ್ಸ್‌ನಲ್ಲಿ 7 ಬೌಂಡರಿ ಹಾಗೂ 2 ಸಿಕ್ಸರ್ ಸಹ ಸೇರಿವೆ. ಎರಡನೇ ಇನ್ನಿಂಗ್ಸ್‌ನಲ್ಲಿ ಜೈಸ್ವಾಲ್ ಸಿಡಿಸಿದ ಈ ಎರಡೂ ಸಿಕ್ಸರ್ಗಳು ಅವರನ್ನು ದಾಖಲೆಯ ಪುಟ ಸೇರುವಂತೆ ಮಾಡಿವೆ.
ವಾಸ್ತವವಾಗಿ ಈ ಎರಡು ಸಿಕ್ಸರ್‌ಗಳ ಮೂಲಕ ಟೆಸ್ಟ್ ಕ್ರಿಕೆಟ್‌ನಲ್ಲಿ ಕ್ಯಾಲೆಂಡರ್ ವರ್ಷದಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ದಾಖಲೆಯನ್ನು ಯಶಸ್ವಿ ಜೈಸ್ವಾಲ್ ಮಾಡಿದ್ದಾರೆ. 2024 ರಲ್ಲಿ ಜೈಸ್ವಾಲ್ ಇದುವರೆಗೆ ಒಟ್ಟು 34 ಸಿಕ್ಸರ್‌ಗಳನ್ನು ಸಿಡಿಸಿದ್ದಾರೆ. ಈ ಮೂಲಕ ನ್ಯೂಜಿಲೆಂಡ್‌ನ ಮಾಜಿ ಆರಂಭಿಕ ಬ್ರೆಂಡನ್ ಮೆಕಲಮ್ ಅವರ 33 ಸಿಕ್ಸರ್‌ಗಳ ದಾಖಲೆಯನ್ನು ಜೈಸ್ವಾಲ್ ಮುರಿದಿದ್ದಾರೆ.
ಇನ್ನು ಈ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಜಾರಿರುವ ನ್ಯೂಜಿಲೆಂಡ್‌ನ ಮಾಜಿ ಕ್ರಿಕೆಟಿಗ ಬ್ರೆಂಡನ್ ಮೆಕಲಮ್ 2014 ರಲ್ಲಿ ಕ್ಯಾಲೆಂಡರ್ ವರ್ಷದಲ್ಲಿ 33 ಸಿಕ್ಸರ್‌ಗಳನ್ನು ಬಾರಿಸಿದ್ದರು.
ಇಂಗ್ಲೆಂಡ್‌ನ ಅದ್ಭುತ ಆಲ್‌ರೌಂಡರ್ ಬೆನ್ ಸ್ಟೋಕ್ಸ್ 2022 ರಲ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ 26 ಸಿಕ್ಸರ್‌ಗಳನ್ನು ಬಾರಿಸಿದ್ದು, ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.
ನಾಲ್ಕನೇ ಸ್ಥಾನದಲ್ಲಿರುವ ಆಸ್ಟ್ರೇಲಿಯಾದ ಶ್ರೇಷ್ಠ ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ಆಡಮ್ ಗಿಲ್‌ಕ್ರಿಸ್ಟ್ 2005 ರಲ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ 22 ಸಿಕ್ಸರ್‌ಗಳನ್ನು ಬಾರಿಸಿದ್ದರು.
ಭಾರತ ಕ್ರಿಕೆಟ್ ತಂಡದ ಅತ್ಯಂತ ಆಕ್ರಮಣಕಾರಿ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರಾದ ವೀರೇಂದ್ರ ಸೆಹ್ವಾಗ್, 2008 ರಲ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ 22 ಸಿಕ್ಸರ್‌ಗಳನ್ನು ಬಾರಿಸಿದ್ದರು. ಆ ಮೂಲಕ ಸೆಹ್ವಾಗ್ ಒಂದು ಕ್ಯಾಲೆಂಡರ್ ವರ್ಷದಲ್ಲಿ ಅಧಿಕ ಸಿಕ್ಸರ್ ಬಾರಿಸಿದ ಬ್ಯಾಟ್ಸ್ಮನ್ಗಳ ಪಟ್ಟಿಯಲ್ಲಿ ಇದೀಗ 5ನೇ ಸ್ಥಾನಕ್ಕೆ ಜಾರಿದ್ದಾರೆ.