ಚಿಕ್ಕಮಗಳೂರು: ಡಿಸೆಂಬರ್​ 14 ರಂದು ದತ್ತಮಾಲಾ ಧಾರಿಗಳಿಂದ ದತ್ತ ಪಾದುಕೆ ದರ್ಶನ, ಜಿಲ್ಲೆಯಲ್ಲಿ ಹೈ ಅಲರ್ಟ್​

ನಟ ದರ್ಶನ್ ಜಾಮೀನು ರದ್ದು ಮಾಡುವಂತೆ ಕೋರ್ಟ್‌ ಗೆ ಮನವಿ ಸಲ್ಲಿಸುತ್ತೇವೆ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ನಡೆದ ಜಾಗದಲ್ಲಿ ನಟ ದರ್ಶನ್ ಇದ್ದ ಬಗ್ಗೆ ಫೋಟೋ ಸಿಕ್ಕ ಹಿನ್ನೆಲೆ ದರ್ಶನ್ ಜಾಮೀನು ರದ್ದತಿ ಬಗ್ಗೆ ಕ್ರಮ ಜರುಗಿಸುವುದಾಗಿ ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿಂದು ಮಾತಾಡಿದ ಅವರು, ದರ್ಶನ್ ಜತೆಗಿದ್ದ ಇತರೆ ಆರೋಪಿಗಳ ಮೊಬೈಲ್ ಫೋನ್ ಗಳನ್ನು ಎಫ್ ಎಸ್ ಎಲ್ ವರದಿಗಾಗಿ ಹೈದರಾಬಾದ್ ಗೆ ಕಳುಹಿಸಲಾಗಿತ್ತು. ಕೊಲೆ ನಡೆದ ಸ್ಥಳದಲ್ಲಿ ದರ್ಶನ್ ಇರುವ ಫೋಟೋಗಳು ಲಭ್ಯವಾಗಿದೆ. ಮೇಲ್ನೋಟಕ್ಕೆ ದರ್ಶನ್ ಪಾತ್ರ ದೊಡ್ಡದಾಗಿ ಕಾಣುತ್ತಿದೆ. ಹೀಗಾಗಿ ದರ್ಶನ್ ಜಾಮೀನು ರದ್ದು ಮಾಡುವಂತೆ ಕೋರ್ಟ್‌ ಗೆ ಮನವಿ ಸಲ್ಲಿಸುವುದಾಗಿ ಹೇಳಿದ್ದಾರೆ.

ಯಾರೋ ಜೊತೆಯಲ್ಲಿದ್ದವನು ವಿಡಿಯೊ ಮಾಡಿಕೊಂಡಿದ್ದ. ಅದನ್ನು ನ್ಯಾಯಾಲಯಕ್ಕೆ ಸಲ್ಲಿಸಿ ಜಾಮೀನು ರದ್ದುಪಡಿಸಬೇಕು, ಮುಂದಿನ ಕ್ರಮದ ಬಗ್ಗೆ ತನಿಖೆ ನಡೆಯುತ್ತಿದೆ ಎಂದರು.

ದರ್ಶನ್ ಬೆನ್ನು ಆಪರೇಶನ್ ಮಾಡಿಸಿಲ್ಲ. ಹಾಗೆಯೇ ಕಾಲ ಕಳೆಯುತ್ತಿದ್ದಾರೆ. ದರ್ಶನ್ ಗೆ ಆಪರೇಷನ್ ಅಗತ್ಯ ಇಲ್ಲ ಎಂದು ಇದರಿಂದ ಗೊತ್ತಾಗುತ್ತದೆ. ಆಪರೇಷನ್ ಮಾಡದಿದ್ದರೆ ಬೆನ್ನುಮೂಳೆ ಮುರಿದು ಹೋಗುತ್ತದೆ ಎಂದು ಹೇಳುತ್ತಿದ್ದರು. ಇಷ್ಟು ದಿನವಾದರೂ ವೈದ್ಯರು ಆಪರೇಷನ್ ಮಾಡಿಲ್ಲ, ಕೋರ್ಟ್ ಈ ಬಗ್ಗೆ ಗಮನ ಹರಿಸಿ ಸೂಕ್ತ ಆದೇಶ ನೀಡಬೇಕು ಎಂದರು.

No Comments

Leave A Comment