ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

BGT 2025: ಕೊನೆಗೂ ಶತಕ ಸಿಡಿಸಿದ Virat Kohli, ಲೆಜೆಂಡ್ ಗವಾಸ್ಕರ್ ದಾಖಲೆ ಧೂಳಿಪಟ!

ಪರ್ತ್: ಭಾರತ ಮತ್ತು ಆಸ್ಟ್ರೇಲಿಯ ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿಯ ಮೊದಲ ಪಂದ್ಯ ನಿರ್ಣಾಯಕ ಘಟ್ಟ ತಲುಪಿದ್ದು, ಭಾರತದ ಬೃಹತ್ ಮೊತ್ತದಲ್ಲಿ ಮಹತ್ತರ ಪಾತ್ರವಹಿಸಿದ ವಿರಾಟ್ ಕೊಹ್ಲಿ ಶತಕದ ಮೂಲಕ ಭಾರತದ ಕ್ರಿಕೆಟ್ ಲೆಜೆಂಡ್ ಸುನಿಲ್ ಗವಾಸ್ಕರ್ ರ ದಾಖಲೆಯೊಂದನ್ನು ಧೂಳಿಪಟ ಮಾಡಿದ್ದಾರೆ.

ಹೌದು.. ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ 2ನೇ ಇನ್ನಿಂಗ್ಸ್ ನಲ್ಲಿ ಭರ್ಜರಿ ಬ್ಯಾಟ್ ಬೀಸಿದ ವಿರಾಟ್ ಕೊಹ್ಲಿ ಕೇವಲ 143 ಎಸೆತಗಳಲ್ಲಿ 2 ಸಿಕ್ಸರ್ ಮತ್ತು 8 ಬೌಂಡರಿಗಳ ನೆರವಿನಿಂದ ಅಜೇಯ 100 ಗಳಿಸಿದರು. ಆ ಮೂಲಕ ಟೆಸ್ಟ್ ಕ್ರಿಕೆಟ್ ನಲ್ಲಿ 30ನೇ ಶತಕ ಮತ್ತು ಒಟ್ಟಾರೆ 80ನೇ ಅಂತಾರಾಷ್ಟ್ರೀಯ ಶತಕ ಸಿಡಿಸಿದರು.

ಈ ಶತಕದ ಮೂಲಕ ಕೊಹ್ಲಿ ಭಾರತದ ಕ್ರಿಕೆಟ್ ಲೆಜೆಂಡ್ ಸುನಿಲ್ ಗವಾಸ್ಕರ್ ರ ದಾಖಲೆಯೊಂದನ್ನು ಹಿಂದಿಕ್ಕಿದ್ದು, ಒಂದೇ ಎದುರಾಳಿ ತಂಡದ ವಿರುದ್ಧ ಆತೀ ಹೆಚ್ಚು ಶತಕ ಸಿಡಿಸಿದ ಭಾರತದ ಜಂಟಿ 2ನೇ ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. ಕೊಹ್ಲಿಗೆ ಇದು ಆಸ್ಟ್ರೇಲಿಯಾ ವಿರುದ್ಧ 9ನೇ ಶತಕವಾಗಿದ್ದು, ಆ ಮೂಲಕ ಕೊಹ್ಲಿ ಇದೇ ಆಸ್ಟ್ರೇಲಿಯಾ ತಂಡದ ವಿರುದ್ಧ 8 ಶತಕ ಸಿಡಿಸಿದ್ದ ಗವಾಸ್ಕರ್ ದಾಖಲೆಯನ್ನು ಹಿಂದಿಕ್ಕಿದ್ದಾರೆ.

Most Test hundreds against an opponent for India

  • 13 – Sunil Gavaskar vs West Indies
  • 11 – Sachin Tendulkar vs Australia
  • 9 – Sachin Tendulkar vs Sri Lanka
  • 9 – Virat Kohli vs Australia
  • 8 – Sunil Gavaskar vs Australiaಇನ್ನು ಈ ಪಟ್ಟಿಯಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 13 ಶತಕ ಸಿಡಿಸಿದ ಸುನಿಲ್ ಗವಾಸ್ಕರ್ ಅಗ್ರಸ್ಥಾನದಲ್ಲಿದ್ದು, ಆಸ್ಟ್ರೇಲಿಯಾ ವಿರುದ್ಧ 11 ಶತಕ ಸಿಡಿಸಿರುವ ಸಚಿನ್ ತೆಂಡೂಲ್ಕರ್ 2ನೇ ಸ್ಥಾನದಲ್ಲಿದ್ದಾರೆ. ಇನ್ನು ಶ್ರೀಲಂಕಾ ವಿರುದ್ಧ 9 ಶತಕ ಸಿಡಿಸಿರುವ ಸಚಿನ್ ಮತ್ತು ಆಸ್ಟ್ರೇಲಿಯಾ ವಿರುದ್ಧ 9 ಶತಕ ಸಿಡಿಸಿರುವ ಕೊಹ್ಲಿ ಜಂಟಿ 2ನೇ ಸ್ಥಾನದಲ್ಲಿದ್ದಾರೆ.

kiniudupi@rediffmail.com

No Comments

Leave A Comment