ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ರಾಜ್ಯದ 3ಮೂರು ಕ್ಷೇತ್ರಗಳಲ್ಲಿ ನಡೆದ ಉಪಚುನಾವಣೆಯಲ್ಲಿ ಕಮಲದ ದಳವನ್ನು ಉರುಳಿಸಿ ಕೈಗೆ ಜೈ ಎಂದ ಮತದಾರ:ಸುರೇಶ್ ಶೆಟ್ಟಿ ಬನ್ನಂಜೆ

ಉಡುಪಿ:ಕೇಂದ್ರದ ಮೋದಿ ಸರ್ಕಾರದ ಬೆಲೆ ಏರಿಕೆ ನೀತಿ ಹಾಗೂ ಸುಳ್ಳು ಭರವಸೆಗಳು ಮತ್ತು ಕೇವಲ ಅಧಿಕಾರಕ್ಕಾಗಿ ಹಿಂದುತ್ವವನ್ನು ಬಳಸುವುದು ಈ ಎಲ್ಲ ಕಾರಣಗಳಿಂದ ಕಂಗೆಟ್ಟ ಮತದಾರರು ಕಾಂಗ್ರೆಸ್ ಪಕ್ಷದ ಸರಕಾರ ತಮಗೆ ನೀಡಿದಂತಹ ಗ್ಯಾರಂಟಿ ಯೋಜನೆಗಳಿಂದ ಸಂತುಷ್ಟರಾಗಿ ತಮಗೆ ಆಸರೆಯಾಗಿ ನಿಂತ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿರುತ್ತಾರೆ.

ಕೇವಲ ಅಧಿಕಾರಕ್ಕಾಗಿ ಈ ಬಿಜೆಪಿ ಮತ್ತು ದಳದವರುಕಾಂಗ್ರೆಸ್ ಪಕ್ಷದ ವಿರುದ್ಧ ಹಾಗೂ ನಮ್ಮ ಜನಪ್ರಿಯ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಅಪಪ್ರಚಾರವನ್ನು ಮಾಡಿ ಕಾಂಗ್ರೆಸ್ ನಾಯಕರ ವಿರುದ್ಧ ಸುಳ್ಳು ಹೇಳಿಕೆಗಳನ್ನು ನೀಡಿ ಜನರನ್ನು ಮೋಸಗೊಳಿಸಲು ಯತ್ನಿಸಿದರು.

ಆದರೆ ಇದಕ್ಕೆ ಸೊಪ್ಪು ಹಾಕದ ಮತದಾರರು ಕಮಲದ ದಳವನ್ನೇ ಉರುಳಿಸಿ ರಾಜ್ಯದಲ್ಲಿ ಸ್ವಚ್ಛ ಆಡಳಿತವನ್ನು ನೀಡುತ್ತಿರುವ ಹಾಗೂ ಜನಸಾಮಾನ್ಯರಿಗೆ ಬೆಂಬಲವಾಗಿರುವ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವಲ್ಲಿ ಸಫಲರಾದರು ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ರಾಜೀವ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಇದರ ಅಧ್ಯಕ್ಷರಾದ ಸುರೇಶ್ ಶೆಟ್ಟಿ ಬನ್ನಂಜೆ ಇವರು ತಿಳಿಸಿರುತ್ತಾರೆ.

No Comments

Leave A Comment