ಚಿಕ್ಕಮಗಳೂರು: ಡಿಸೆಂಬರ್​ 14 ರಂದು ದತ್ತಮಾಲಾ ಧಾರಿಗಳಿಂದ ದತ್ತ ಪಾದುಕೆ ದರ್ಶನ, ಜಿಲ್ಲೆಯಲ್ಲಿ ಹೈ ಅಲರ್ಟ್​

ಉತ್ತರ ಪ್ರದೇಶ: ರಸ್ತೆ ಅಪಘಾತದಲ್ಲಿ ಐವರು ಸಾವು, ನಾಲ್ವರಿಗೆ ಗಾಯ

ಹರ್ದೋಯಿ: ಉತ್ತರ ಪ್ರದೇಶದ ಹರ್ದೋಯ್ ಜಿಲ್ಲೆಯಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಮುಂಜಾನೆ 3 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಮದುವೆ ಸಮಾರಂಭ ಮುಗಿಸಿ ಹಿಂತಿರುಗುತ್ತಿದ್ದ ಬೊಲೆರೊ ವಾಹನ ನಿಂತಿದ್ದ ಖಾಸಗಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಬಸ್‌ ನಲ್ಲಿಯೂ ಮದುವೆ ಸಮಾರಂಭಕ್ಕೆ ತೆರಳಿದ್ದ ಜನರದಿದ್ದರು ಎನ್ನಲಾಗಿದೆ.

ಡಿಕ್ಕಿಯ ರಭಸಕ್ಕೆ ಬೊಲೆರೊದ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದ ಮಾಹಿತಿ ತಿಳಿದು ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಗಾಯಾಳುಗಳನ್ನು ಕೂಡಲೇ ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಬೊಲೆರೊ ನಿಯಂತ್ರಣ ಕಳೆದುಕೊಂಡು ನಿಂತಿದ್ದ ಬಸ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯಲ್ಲಿ ಐವರು ಸಾವನ್ನಪ್ಪಿದ್ದಾರೆ. ಗಾಯಗೊಂಡ ನಾಲ್ವರನ್ನು ತಕ್ಷಣ ಚಿಕಿತ್ಸೆಗಾಗಿ ಲಖೌನಾಗೆ ರವಾನಿಸಲಾಗಿದೆ. ಬಸ್ಸಿನಲ್ಲಿದ್ದ ಎಲ್ಲಾ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ, ಆದರೆ ಯಾರಿಗೂ ಗಂಭೀರ ಗಾಯಗಳಾಗಿಲ್ಲ . ಸಂತ್ರಸ್ತರ ಕುಟುಂಬದವರ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರ್ ನೃಪೇಂದ್ರ ಕುಮಾರ್ ತಿಳಿಸಿದ್ದಾರೆ.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ದುರಂತ ಘಟನೆಯ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ ಮತ್ತು ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳಿಗೆ ಸೂಕ್ತ ವೈದ್ಯಕೀಯ ಆರೈಕೆಗೆ ಜಿಲ್ಲಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದು, ಶೀಘ್ರವಾಗಿ ಅವರು ಚೇತರಿಸಿಕೊಳ್ಳಲಿ ಎಂದು ಹಾರೈಸಿದರು. ಸ್ಥಳದಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ತ್ವರಿತಗೊಳಿಸಲು ಮತ್ತು ಸಂತ್ರಸ್ತರ ಕುಟುಂಬಗಳಿಗೆ ಅಗತ್ಯವಿರುವ ಎಲ್ಲಾ ಬೆಂಬಲವನ್ನು ಒದಗಿಸಲು ಉತ್ತರ ಪ್ರದೇಶ ಮುಖ್ಯಮಂತ್ರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮುಂದಿನ ದಿನಗಳಲ್ಲಿ ಇಂತಹ ಅವಘಡಗಳು ನಡೆಯದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಭರವಸೆ ನೀಡಿದ್ದಾರೆ. ಚಳಿಗಾಲದ ತಿಂಗಳು ಸಮೀಪಿಸುತ್ತಿದ್ದಂತೆ ರಸ್ತೆಗಳಲ್ಲಿ ದೊಡ್ಡ ಮಂಜು ಬೀಳುವುದರಿಂದ ಇಂತಹ ಅಪಘಾತಗಳು ಸಾಮಾನ್ಯವಾಗಿ ಆಗ್ಗಾಗೆ ಸಂಭವಿಸುತ್ತಿರುತ್ತವೆ.

No Comments

Leave A Comment