ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
ಕೇರಳದ ಸೀರೆ ತೊಟ್ಟು, ಸಂವಿಧಾನದ ಪುಸ್ತಕ ಹಿಡಿದು ಸಂಸದೆಯಾಗಿ ಪ್ರಿಯಾಂಕಾ ಗಾಂಧಿ ಪ್ರಮಾಣವಚನ
ಪ್ರಿಯಾಂಕಾ ಗಾಂಧಿ ವಾದ್ರಾ ಮೊಟ್ಟ ಮೊದಲ ಬಾರಿಗೆ ಸಂಸತ್ ಪ್ರವೇಶಿಸಿದ್ದಾರೆ. ಚೊಚ್ಚಲ ಚುನಾವಣೆಯಲ್ಲೇ ಗೆಲುವು ಸಾಧಿಸಿ ವಯನಾಡ್ನ ಸಂಸದೆಯಾಗಿದ್ದಾರೆ. ಪ್ರಿಯಾಂಕಾ ವಾದ್ರಾ ಅವರು ಸಂಸತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಂದ ಪ್ರಿಯಾಂಕಾ ಪ್ರಮಾಣ ವಚನ ಸ್ವೀಕರಿಸಿದರು. ಪ್ರಿಯಾಂಕಾ ಕೈಯಲ್ಲಿ ಸಂವಿಧಾನದ ಪುಸ್ತಕ ಹಿಡಿದಿದ್ದರು.
ಅವರು ಕೇರಳದ ಬ್ರೋಕೆಡ್ ಸೀರೆಯನ್ನು ಧರಿಸಿದ್ದರು.ಯಾಂಕಾ ತನ್ನ ತಾಯಿ ಸೋನಿಯಾ ಗಾಂಧಿ, ಸಹೋದರ ರಾಹುಲ್ ಗಾಂಧಿ ಮತ್ತು ಪತಿ ರಾಬರ್ಟ್ ವಾದ್ರಾ ಅವರೊಂದಿಗೆ ಸಂಸತ್ ಭವನವನ್ನು ತಲುಪಿದ್ದಾರೆ.ಅವರ ಮಕ್ಕಳಿಬ್ಬರೂ ಸಂಸತ್ಗೆ ಆಗಮಿಸಿದ್ದರು. ಇದರೊಂದಿಗೆ ಸಂಸತ್ತಿನಲ್ಲಿ ಗಾಂಧಿ ಕುಟುಂಬದ ಮೂವರು ಸದಸ್ಯರಿದ್ದಾರೆ.
ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ಲೋಕಸಭೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡರೆ, ತಾಯಿ ಸೋನಿಯಾ ಗಾಂಧಿ ರಾಜ್ಯಸಭಾ ಸದಸ್ಯರಾಗಿದ್ದಾರೆ. ಪ್ರಿಯಾಂಕಾ ಪ್ರಮಾಣ ವಚನ ಸ್ವೀಕಾರದ ನಂತರ ಲೋಕಸಭೆಯಲ್ಲಿ ವಿರೋಧ ಪಕ್ಷದ ಸದಸ್ಯರ ನಡುವೆ ಗದ್ದಲ ಆರಂಭವಾಯಿತು. ಎಲ್ಲರೂ ಶಾಂತಿ ಕಾಪಾಡುವಂತೆ ಹಾಗೂ ಕಲಾಪ ಸುಗಮವಾಗಿ ನಡೆಯುವಂತೆ ನೋಡಿಕೊಳ್ಳುವಂತೆ ಸ್ಪೀಕರ್ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಇದಾದ ಬಳಿಕ ಲೋಕಸಭೆಯ ಕಲಾಪವನ್ನು ಮುಂದೂಡಲಾಯಿತು.