ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ನ.30ರಂದು ತುಳುಕೂಟದಿಂದ ‘ತುಳು ಮಿನದನ-2024

ಉಡುಪಿ: ಉಡುಪಿ ತುಳುಕೂಟದ ವತಿಯಿಂದ ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನಲ್ಲಿ ನ.30ರಂದು ‘ತುಳು ಮಿನದನ- 2024’ ನಡೆಯಲಿದೆ ಎಂದು ತುಳುಕೂಟ ಉಡುಪಿ ಅಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ ತಿಳಿಸಿದ್ದಾರೆ.

ಉಡುಪಿ ಪ್ರೆಸ್ ಕ್ಲಬ್‌ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತುಳುಕೂಟವು ಈ ಬಾರಿ ಮಂಗಳೂರು ವಿವಿಯ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ತುಳು ಅಧ್ಯಯನ ಪೀಠ, ಮಿಲಾಗ್ರಿಸ್ ಕಾಲೇಜು ಕಲ್ಯಾಣಪುರ, ಜೈ ತುಳುನಾಡು ಉಡುಪಿ, ರೋಟರಿ ಕ್ಲಬ್ ಕಲ್ಯಾಣಪುರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಹಗಳ ಸಹಭಾಗಿತ್ವದಲ್ಲಿ ಒಂದು ದಿನದ ಈ ವಿವಿಧ ತುಳು ಸ್ಪರ್ಧಾ ಕಾರ್ಯಕ್ರಮವನ್ನು ಆಯೋಜಿಸಿದೆ ಎಂದರು.

ನ.30ರಂದು ಬೆಳಗ್ಗೆ 9:30ಕ್ಕೆ ಮಂಗಳೂರು ವಿವಿಯ ಕುಲಪತಿಗಳಾದ ಪ್ರೊ.ಪಿ.ಎಲ್.ಧರ್ಮ ಅವರು ತುಳು ಮಿನದನ ವನ್ನು ಉದ್ಘಾಟಿಸಲಿದ್ದಾರೆ. ಮಂಗಳೂರು ವಿವಿ ಸಿಂಡಿಕೇಟ್ ಸದಸ್ಯ ಸುರೇಶ್‌ಕುಮಾರ್ ಬಿ.ನಾವೂರು, ಮಿಲಾಗ್ರಿಸ್ ವಿದ್ಯಾಸಂಸ್ಥೆಗಳ ಸಂಚಾಲಕ ವಂ.ಫರ್ಡಿನಾಂಡ್ ಗೊನ್ಸಾಲ್ವಿಸ್ ಆಶೀರ್ವಚನ ನೀಡುವರು ಎಂದರು.
ಉಚ್ಚಿಲ ದಸರಾ ಉತ್ಸವ ಸಮಿತಿಯ ಅಧ್ಯಕ್ಷ ವಿನಯ ಕರ್ಕೇರ, ಮಂಗಳೂರು ವಿವಿಯ ಶ್ರೀಧರ್ಮಸ್ಥ ಮಂಜುನಾಥೇಶ್ವರ ತುಳು ಅಧ್ಯಯನ ಪೀಠದ ಸಂಯೋಜಕ ಡಾ.ಮಾಧವ ಎಂ.ಕೆ. ಹಾಗೂ ಜೈ ತುಳುನಾಡು ಕೇಂದ್ರ ಸಮಿತಿಯ ಅಧ್ಯಕ್ಷ ಉದಯ ಪೂಂಜ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದರು.

ಸಂಜೆ 3:30ಕ್ಕೆ ನಡೆಯುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಮಿಲಾಗ್ರಿಸ್ ಕಾಲೇಜಿನ ಪ್ರಾಂಶುಪಾಲರಾದ ಡಾ.ವಿನ್ಸೆಂಟ್ ಆಳ್ವ ವಹಿಸಲಿದ್ದು, ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ ಡಾ.ವಿನ್ಸೆಂಟ್ ಆಳ್ವ ವಹಿಸಲಿದ್ದು, ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ ಡಾ.ಆಕಾಶ್ ರಾಜ್ ಜೈನ್, ಕಲ್ಯಾಣ ಪುರದ ಮನೋಹರ ಶೆಟ್ಟಿ ತೋನ್ಸೆ, ರೋಟರಿ ಕ್ಲಬ್ ಕಲ್ಯಾಣಪುರದ ಅಧ್ಯಕ್ಷ ಬ್ಯಾಪ್ಟಿಸ್ಟ್ ಡಯಾಸ್ ಹಾಗೂ ತುಳುಕೂಟದ ಕೋಶಾಧಿಕಾರಿ ಚೈತನ್ಯ ಎಂ.ಜಿ. ಅತಿಥಿಗಳಾಗಿ ಉಪಸ್ಥಿತರಿರುವರು.

ಮಂಗಳೂರು ವಿವಿಗೆ ಸೇರಿದ ಸುಮಾರು 12 ಕಾಲೇಜುಗಳ 250ಕ್ಕೂ ಅಧಿಕ ವಿದ್ಯಾರ್ಥಿಗಳು 12ನೇ ವರ್ಷದಲ್ಲಿ ನಡೆಯುವ ಈ ಬಾರಿಯ ತುಳು ಮಿನದನದ ವಿವಿಧ ಸ್ಪರ್ಧೆಗಳಲ್ಲಿ ಸ್ಪರ್ಧಿಸಲಿದ್ದಾರೆ. ತುಳು ಮಿನದನದಲ್ಲಿ ತುಳು ಸಂಸ್ಕೃತಿ ಹಾಗೂ ಆಚಾರ ವಿಚಾರಗಳನ್ನು ಪ್ರತಿಬಿಂಬಿಸುವ ಮೂರು ವೈಯಕ್ತಿಕ ಹಾಗೂ ನಾಲ್ಕು ಗುಂಪು ಸ್ಪರ್ಧೆಗಳು ನಡೆಯಲಿವೆ ಎಂದು ಜಯಕರ ಶೆಟ್ಟಿ ಇಂದ್ರಾಳಿ ತಿಳಿಸಿದರು.

ತುಳುಕೂಟದ ಪದಾಧಿಕಾರಿಗಳಾದ ಗಂಗಾಧರ ಕಿದಿಯೂರು, ಡಾ.ವಿ.ಕೆ. ಯಾದವ್, ಪ್ರಭಾಕರ ಭಂಡಾರಿ, ಪ್ರಕಾಶ ಸುವರ್ಣ, ಕಾಲೇಜಿನ ಪಿಆರ್‌ಓ ರವಿನಂದನ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

kiniudupi@rediffmail.com

No Comments

Leave A Comment