ಚಿಕ್ಕಮಗಳೂರು: ಡಿಸೆಂಬರ್ 14 ರಂದು ದತ್ತಮಾಲಾ ಧಾರಿಗಳಿಂದ ದತ್ತ ಪಾದುಕೆ ದರ್ಶನ, ಜಿಲ್ಲೆಯಲ್ಲಿ ಹೈ ಅಲರ್ಟ್
ಗಿನ್ನೆಸ್ ದಾಖಲೆ ಬರೆದಿದ್ದ ವಿಶ್ವದ ಅತ್ಯಂತ ಹಿರಿಯ ವ್ಯಕ್ತಿ ನಿಧನ
ವಿಶ್ವದ ಅತ್ಯಂತ ಹಿರಿಯ ವ್ಯಕ್ತಿ ಎಂದೆನಿಸಿಕೊಂಡಿದ್ದ ಜಾನ್ ಆಲ್ಫ್ರೆಡ್ ಟಿನ್ನಿಸ್ವುಡ್(112) ಸೋಮವಾರ (ನ.25)ರಂದು ನಿಧನ ಹೊಂದಿರುವುದಾಗಿ ವರದಿಯಾಗಿದೆ. ಈ ವರ್ಷದ ಏಪ್ರಿಲ್‌ನಲ್ಲಿ ವಿಶ್ವದ ಅತ್ಯಂತ ಹಿರಿಯ ವ್ಯಕ್ತಿ ಎಂದು ದಾಖಲೆ ಬರೆದಿದ್ದ ಆಲ್ಫ್ರೆಡ್ ಟಿನ್ನಿಸ್ವುಡ್ ತನ್ನ 112ನೇ ವಯಸ್ಸಿನಲ್ಲಿ ವಯೋಸಹಜ ಕಾಯಿಲೆಯಿಂದ ಇಂಗ್ಲೆಂಡ್‌ನ ಲಿವರ್‌ಪೂಲ್ ಕೇರ್ ಹೋಮ್ನಲ್ಲಿ ಕೊನೆಯುಸಿರೆಳೆದಿದ್ದಾರೆ.
1912, ಆಗಸ್ಟ್ 26 ರಂದು ಜನಿಸಿದ ಜಾನ್ ಟಿನ್ನಿಸ್ವುಡ್ ಅವನು ತನ್ನ ಜೀವಿತಾವಧಿಯಲ್ಲಿ ಎರಡು ಮಹಾಯುದ್ಧಗಳನ್ನು ಕಂಡಿದ್ದಾರೆ. ಎರಡನೆಯ ಮಹಾಯುದ್ಧದ ಸಮಯದಲ್ಲಿ ಅವರು ಬ್ರಿಟಿಷ್ ಸೈನ್ಯದಲ್ಲಿ ಸೇವೆ ಸಲ್ಲಿಸಿದ್ದರು. ಲೆಕ್ಕಪರಿಶೋಧಕರಾಗಿ ನಿವೃತ್ತರಾದ ಬಳಿಕ ಆರೋಗ್ಯಕರ ಜೀವನ ಶೈಲಿಯನ್ನು ಕಾಪಾಡಿಕೊಂಡಿದ್ದರು. ಧೂಮಪಾನ ಮಾಡುವ ಅಭ್ಯಾಸವಿರಲ್ಲಿಲ್ಲ, ಅದರಂತೆ ಮಿತವಾಗಿ ಮದ್ಯ ಸೇವಿಸುತ್ತಿದ್ದರು ಎಂದು ಅವರು ಕುಟುಂಬಸ್ಥರು ತಿಳಿಸಿದ್ದಾರೆ.