ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ
ಪುತ್ತೂರು: ಕೆ.ಕೆ.ಕುಂಞಿ ಅಹ್ಮದ್ ಹಾಜಿ ನಿಧನ
ಪುತ್ತೂರು: ಪುತ್ತೂರಿನ ಹಿರಿಯ ಸಾಮಾಜಿಕ ಧುರೀಣ, ಮಾಡನ್ನೂರು ಗ್ರಾಮದ ಅಮ್ಚಿನಡ್ಕ ನಿವಾಸಿ ಮಾಡನ್ನೂರು ಕೊಚ್ಚಿ ಮರ್ಹೂಂ ಅಬ್ದುಲ್ ಖಾದರ್ ಹಾಜಿಯವರ ಪುತ್ರ ಕೆ.ಕೆ.ಕುಂಞಿ ಅಹ್ಮದ್ ಹಾಜಿ(87) ವಯೋಸಹಜ ಅನಾರೋಗ್ಯದಿಂದ ಶನಿವಾರ ಮುಂಜಾನೆ ಸ್ವಗೃಹದಲ್ಲಿ ನಿಧನರಾದರು.
ಮಾಡನ್ನೂರು ಜುಮಾ ಮಸೀದಿಯ ಮತ್ತು ಅಮ್ಚಿನಡ್ಕ ಜುಮಾ ಮಸೀದಿಯ ಆಡಳಿತ ಸಮಿತಿಯಲ್ಲಿ ಹಲವಾರು
ವರ್ಷಗಳ ಕಾಲ ಪ್ರಧಾನ ಕಾರ್ಯದರ್ಶಿಯಾಗಿ ಮತ್ತು ಅಧ್ಯಕ್ಷರಾಗಿ, ಕಾವು ವ್ಯವಸಾಯ ಸಹಕಾರಿ ಸಂಘದ ಅಧ್ಯಕ್ಷರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು.
ಬಿಜೆಪಿಯಲ್ಲಿ ಸಕ್ರಿಯರಾಗಿದ್ದ ಅವರು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಮಟ್ಟದ ನಾಯಕರಾಗಿದ್ದರು. ದ.ಕ.ಜಿಲ್ಲಾ ಬಿಜೆಪಿಯ ಉಪಾಧ್ಯಕ್ಷರಾಗಿ, ಬಿಜೆಪಿ ರಾಜ್ಯ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷರಾಗಿದ್ದರು. ಹಲವಾರು ಸಂಘಸಂಸ್ಥೆಗಳಲ್ಲಿ ಮತ್ತು ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದರು.
ಮೃತರು ಇಬ್ಬರು ಪುತ್ರರು, ಮೂವರು ಪುತ್ರಿಯರು ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ