ಚಿಕ್ಕಮಗಳೂರು: ಡಿಸೆಂಬರ್ 14 ರಂದು ದತ್ತಮಾಲಾ ಧಾರಿಗಳಿಂದ ದತ್ತ ಪಾದುಕೆ ದರ್ಶನ, ಜಿಲ್ಲೆಯಲ್ಲಿ ಹೈ ಅಲರ್ಟ್
ಫೆಂಗಲ್ ಚಂಡಮಾರುತ:ಚೆನ್ನೈ ಏರ್‌ಪೋರ್ಟ್‌ನಿಂದ 13 ವಿಮಾನಗಳ ಯಾನ ರದ್ದು-ತಮಿಳುನಾಡು, ಆಂಧ್ರಪ್ರದೇಶದ ಹಲವು ಸ್ಥಳಗಳಲ್ಲಿ ಭಾರೀ ಮಳೆ ಸಾಧ್ಯತೆ
ಫೆಂಗಲ್ ಚಂಡಮಾರುತತೀವ್ರತೆ ಪಡೆದುಕೊಂಡಿದೆ. ಚೆನ್ನೈನಲ್ಲಿ ಭಾರಿ ಮಳೆಯಿಂದಾಗಿ ವಿಮಾನ ಮತ್ತು ರೈಲು ಸೇವೆಗಳಲ್ಲಿ ಭಾರಿ ವ್ಯತ್ಯಯ ಉಂಟಾಗಿದೆ.
ಮಳೆಯ ಅಬ್ಬರದಿಂದಾಗಿ ಚೆನ್ನೈ ವಿಮಾನ ನಿಲ್ದಾಣದಲ್ಲಿ 10ಕ್ಕೂ ಹೆಚ್ಚು ಆಗಮನ ಮತ್ತು ನಿರ್ಗಮನ ರದ್ದುಗೊಳಿಸಲಾಗಿದೆ. ಇಂಡಿಯೋ ತನ್ನ ಎಲ್ಲಾ ಆಗಮನ ಮತ್ತು ನಿರ್ಗಮನ ವಿಮಾನ ಕಾರ್ಯಾಚರಣೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಇದರೊಂದಿಗೆ ಅಬುದಾಬಿಯಿಂದ ಚೆನ್ನೈಗೆ ತೆರಳಬೇಕಿದ್ದ ಇಂಡಿಗೋ ವಿಮಾನವನ್ನು ಪ್ರತಿಕೂಲ ಹವಾಮಾನದಿಂದಾಗಿ ಬೆಂಗಳೂರಿಗೆ ತಿರುಗಿಸಲಾಗಿದೆ.
ಚಂಡಮಾರುತದಿಂದಾಗಿ ತಿರುವಳ್ಳೂರು, ಕಾಂಚೀಪುರಂ, ಕಲ್ಲಕುರಿಚಿ, ಮತ್ತು ತಮಿಳುನಾಡಿನ ಕಡಲೂರು ಜಿಲ್ಲೆಗಳು ಮತ್ತು ಪುದುಚೇರಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ತಮಿಳುನಾಡು, ಆಂಧ್ರಪ್ರದೇಶದ ಹಲವು ಸ್ಥಳಗಳಲ್ಲಿ ಭಾರೀ ಮಳೆ ಸಾಧ್ಯತೆ
ಬಂಗಾಳಕೊಲ್ಲಿಯಲ್ಲಿ ಫೆಂಗಲ್ ಚಂಡಮಾರುತ ತೀವ್ರತೆ ಪಡೆದಿದೆ. , ಉತ್ತರ ತಮಿಳುನಾಡು ಮತ್ತು ಪುದುಚೇರಿ ಕರಾವಳಿಗೆ ಫೆಂಗಲ್ ಚಂಡಮಾರುತ ಅಪ್ಪಳಿಸಲಿದೆ ಎಂದು ವರದಿಯಾಗಿದೆ. ತಮಿಳುನಾಡು ಹಾಗೂ ಆಂಧ್ರಪ್ರದೇಶದ ಹಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ನಿರೀಕ್ಷೆ ಇದೆ ಎನ್ನಲಾಗಿದೆ.
ಕಾರೈಕಲ್ ಮತ್ತು ಮಹಾಬಲಿಪುರಂ ನಡುವೆ ಭೂಕುಸಿತ ಉಂಟುಮಾಡುವ ಸಾಧ್ಯತೆಗಳಿವೆ ಎಂದು ಕೂಡ ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆಯು ತಮಿಳುನಾಡು, ಪುದುಚೇರಿಯ ಜೊತೆಗೆ ಆಂಧ್ರದ ನೆಲ್ಲೂರು, ತಿರುಪತಿ, ಚಿತ್ತೂರು ಜಿಲ್ಲೆಗಳಿಗೂ ರೆಡ್ ಅಲರ್ಟ್ ಘೋಷಣೆ ಮಾಡಿದೆ.
ಇನ್ನು ಚೆನ್ನೈ, ತಿರುವಳ್ಳೂರು, ಕಲ್ಲಕುರಿಚಿ, ಕಾಂಚೀಪುರಂ, ಮತ್ತು ತಮಿಳುನಾಡಿನ ಕಡಲೂರು ಜಿಲ್ಲೆಗಳುಹಾಗು ಪುದುಚೇರಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ಹಾಗು ರಾಣಿಪೇಟ್, ತಿರುವಣ್ಣಾಮಲೈ, ವೆಲ್ಲೂರು, ಪೆರಂಬಲೂರು, ಅರಿಯಲೂರು, ತಿರುವರೂರು, ತಂಜಾವೂರು, ಮೈಲಾಡುತುರೈ, ನಾಗಪಟ್ಟಿಣಂ ಜಿಲ್ಲೆಗಳು ಮತ್ತು ಕಾರೈಕಲ್ ಪ್ರದೇಶದ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.