ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ
ಅಧಿಕಾರ ಸ್ವೀಕರಿಸಲು ತೆರಳುತ್ತಿದ್ದ ಪ್ರೊಬೆಷನರಿ ಐಪಿಎಸ್ ಅಧಿಕಾರಿ ಭೀಕರ ಅಪಘಾತದಲ್ಲಿ ಸಾವು
ಹಾಸನ, ಡಿಸೆಂಬರ್ 02: ಚಾಲಕನ ನಿಯಂತ್ರ ತಪ್ಪಿ ಜೀಪ್ ರಸ್ತೆ ಬದಿಗೆ ಬಿದ್ದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಪ್ರೊಬೆಷನರಿ ಐಪಿಎಸ್ ಅಧಿಕಾರಿ ಹರ್ಷವರ್ಧನ್ (26) ಚಿಕಿತ್ಸೆ ಫಲಕಾರಿಯಾಗದೆ ರವಿವಾರ (ಡಿಸೆಂಬರ್ 01) ರಾತ್ರಿ 9.30ರ ವೇಳೆಗೆ ಮೃತಪಟ್ಟಿದ್ದಾರೆ. ಹಾಸನ ತಾಲೂಕಿನ ಕಿತ್ತಾನೆಗಡಿ ಗ್ರಾಮದ ಬಳಿ ಜೀಪ್ ಪಲ್ಟಿಯಾಗಿತ್ತು. ಕರ್ತವ್ಯಕ್ಕೆ ಹಾಜರಾಗುವ ಮುನ್ನವೇ ಪ್ರೊಬೆಷನರಿ ಐಪಿಎಸ್ ಅಧಿಕಾರಿ ಹರ್ಷಬರ್ಧನ್ ಕೊನೆಯುಸಿರು ಎಳೆದಿದ್ದಾರೆ.
ಮೂಲತಃ ಬಿಹಾರ ಮೂಲದ ಹರ್ಷಬರ್ಧನ ಮದ್ಯಪ್ರದೇಶದ ಸಿಂಗ್ರುಲಿಯಲ್ಲಿ ವಾಸವಾಗಿದ್ದರು. ಅಖಿಲೇಶ್ ಕುಮಾರ್ ಸಿಂಗ್ ಹಾಗೂ ಡೋಲಿ ಸಿಂಗ್ ದಂಪತಿಯ ಪುತ್ರ ಹರ್ಷವರ್ಧನ. ರಾಜ್ಯ ಆಡಳಿತ ಸೇವೆಯಲ್ಲಿರುವ ಸರ್ಕಾರಿ ನೌಕರನ ಮಗನಾಗಿದ್ದ ಹರ್ಷವರ್ಧನ್ ಸಿವಿಲ್ ಇಂಜಿನಿಯರಿಂಗ್ ಪದವಿಧರರಾಗಿದ್ದರು. ಸರ್ಕಾರಿ ಕೆಲಸಕ್ಕೂ ಸೇರಿಕೊಂಡಿದ್ದರು. ಆದರೆ, ಜೀವನದ ಗುರಿ ಬೇರೆಯೇ ಆಗಿತ್ತು. 2022ರಲ್ಲಿ ಮೊದಲ ಯತ್ನದಲ್ಲೇ ಯುಪಿಎಸ್ಸಿಯಲ್ಲಿ 153ನೇ ರ‍್ಯಾಂಕ್ ಪಡೆದಿದ್ದರು.
ಹರ್ಷವರ್ಧನ್ ಅವರು ಇಲಾಖಾ ತರಬೇತಿ ಮುಗಿಸಿ ನಾಲ್ಕು ವಾರ ಮೈಸೂರಿನ ಪೊಲಿಸ್ ಅಕಾಡೆಮಿಯಲ್ಲಿ ಟ್ರೈನಿಂಗ್ ಮುಗಿಸಿದ್ದರು. ನಂತರ, ಅವರು ಹಾಸನ ಜಿಲ್ಲೆಗೆ ಡಿವೈಎಸ್ಪಿಯಾಗಿ ನಿಯೋಜನೆಗೊಂಡಿದ್ದರು. ಹೀಗಾಗಿ ಹಾಸನ ಜಿಲ್ಲಾ ಎಸ್ಪಿ ಕಚೇರಿಯಲ್ಲಿ ವರದಿ ಮಾಡಿಕೊಳ್ಳಲು ಪೊಲೀಸ್ ಇಲಾಖೆಯ ಜೀಪ್ ಹತ್ತಿ ಮೈಸೂರಿನಿಂದ ಹಾಸನದತ್ತ ಬರುತ್ತಿದ್ದರು.
ಹಾಸನ ತಾಲ್ಲೂಕಿನ ಹಾಸನ ಮೈಸೂರು ರಸ್ತೆಯ ರಾಷ್ಟ್ರಿಯ ಹೆದ್ದಾರಿ 373ರ ಕಿತ್ತಾನೆಗಡಿ ಬಳಿ ಅತಿಯಾದ ವೇಗದಲ್ಲಿ ಬರುತ್ತಿದ್ದ ಜೀಪ್ ಸಂಜೆ 4:15ಕ್ಕೆ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಇಳಿದಿದ್ದು, ನಂತರ ತೆಂಗಿನ ಮರಕ್ಕೆ ಡಿಕ್ಕಿ ಹೊಡೆದು, ಪಲ್ಟಿಯಾಗಿದೆ. ಅಪಘಾತದಲ್ಲಿ ಹರ್ಷವರ್ಧನ್ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೆ ಸ್ಥಳೀಯರು ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ತೀವ್ರ ರಕ್ತಸ್ರಾವಾಗಿದ್ದರಿಂದ ಮತ್ತು ತಲೆಗೆ ಗಂಭಿರ ಗಾಯವಾಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗಿದೆ ಮೃತಪಟ್ಟಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ
ಹಾಸನ – ಮೈಸೂರು ಹೆದ್ದಾರಿಯ ಕಿತ್ತಾನೆ ಗಡಿ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಪ್ರೊಬೆಷನರಿ ಐಪಿಎಸ್ ಅಧಿಕಾರಿ ಹರ್ಷಬರ್ಧನ್ ಅವರು ನಿಧನರಾದ ವಿಷಯ ತಿಳಿದು ದುಃಖವಾಯಿತು.
ಐಪಿಎಸ್ ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸಲು ತೆರಳುತ್ತಿದ್ದ ವೇಳೆ ಇಂಥದ್ದೊಂದು ದುರ್ಘಟನೆ ಜರುಗಿದೆ ಎನ್ನುವುದು ಬಹಳಾ ಬೇಸರದ ಸಂಗತಿ. ವರ್ಷಗಳ ಕಠಿಣ ಪರಿಶ್ರಮ ಫಲ
ಹರ್ಷವರ್ಧನ್ ಅವರ ಸಾವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವಿಟರ್ ಮೂಲಕ ಸಂತಾಪ ಸೂಚಿಸಿದ್ದಾರೆ. “ಅಪಘಾತದಲ್ಲಿ ಹರ್ಷವರ್ಧನ್ ನಿಧನರಾದ ವಿಷಯ ತಿಳಿದು ದುಃಖವಾಯಿತು, ಅಧಿಕಾರ ಸ್ವೀಕರಿಸಲು ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ವರ್ಷಗಳ ಕಠಿಣ ಪರಿಶ್ರಮ ಫಲ ನೀಡುವ ಹೊತ್ತಲ್ಲಿ ಹೀಗಾಗಬಾರದಿತ್ತು. ಹರ್ಷವರ್ಧನ್ ಆತ್ಮಕ್ಕೆ ಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸ್ತೇನೆ ಎಂದುಸಂತಾಪ ಸೂಚಿಸಿದ್ದಾರೆ.