ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
‘ಜೀವನದಲ್ಲಿ ಎಲ್ಲವೂ ಪೆರ್ಫೆಕ್ಟ್’; ‘ಬ್ರಹ್ಮಗಂಟು’ ನಟಿ ಶೋಭಿತಾ ಅನುಮಾನಾಸ್ಪದ ಸಾವಿನ ಬೆನ್ನಲ್ಲೇ ಲೆಟರ್ ಪತ್ತೆ
ಕನ್ನಡದ ನಟಿ ಶೋಭಿತಾ ಶಿವಣ್ಣ ಅವರು ಇತ್ತೀಚೆಗೆ ಹೈದರಾಬಾದ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಸಾವು ಅನೇಕರಿಗೆ ಶಾಕಿಂಗ್ ಎನಿಸಿದೆ. ಮದುವೆ ಆಗಿ ಇನ್ನೂ ಎರಡು ವರ್ಷ ತುಂಬಿತ್ತಷ್ಟೇ. ಆಗಲೇ ಜೀವನ ಕೊನೆ ಮಾಡಿಕೊಳ್ಳುವ ನಿರ್ಧಾರಕ್ಕೆ ಅವರು ಬಂದಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಹೈದರಾಬಾದ್ನ ಗಚ್ಚಿಬೌಲಿ ಪೊಲೀಸರು ತನಿಖೆ ನಡೆಸಿದ್ದಾರೆ. ಪೊಲೀಸರಿಗೆ ಆತ್ಮಹತ್ಯೆ ಪತ್ರ ಸಿಕ್ಕಿದೆ. ಇದರಲ್ಲಿ ಒಂದು ವಿಚಾರ ಹೈಲೈಟ್ ಆಗಿದೆ.
ಶೋಭಿತಾಗೆ ಕನ್ನಡ ಚಿತ್ರರಂಗದ ಜೊತೆ ನಂಟು ಇತ್ತು. ‘ಎರಡೊಂದ್ಲಾ ಮೂರು’, ‘ಒಂದ್ ಕಥೆ ಹೇಳಾ’ ಸಿನಿಮಾಗಳಲ್ಲಿ ಶೋಭಿತಾ ನಟಿಸಿದ್ದರು. ‘ಬ್ರಹ್ಮಗಂಟು’ ಧಾರಾವಾಹಿ ಮೂಲಕ ಅವರು ಖ್ಯಾತಿ ಹೆಚ್ಚಿಸಿಕೊಂಡಿದ್ದರು. ಎರಡು ವರ್ಷಗಳ ಹಿಂದೆ ಮದುವೆಯಾದ ಶೋಭಿತಾ ಅವರು ಹೈದರಾಬಾದ್‌ನಲ್ಲಿ ವಾಸವಾಗಿದ್ದರು. ಅಲ್ಲಿಯೇ ಅವರು ನಿಧನ ಹೊಂದಿದ್ದಾರೆ.
ಪೊಲೀಸರಿಗೆ ಶೋಭಿತಾ ಸೂಸೈಡ್ ಲೇಟರ್ ಸಿಕ್ಕಿದೆ. ‘ನೀನು ಸಾಯಬಹುದು ಅಂದ್ರೆ ನೀನು ಸಾಯಬಹುದು’ ಎಂದು ಬರೆಯಲಾಗಿದೆ. ‘ಜೀವನದಲ್ಲಿ ಎಲ್ಲವೂ ಪೆರ್ಫೆಕ್ಟ್ ಆಗಿದೆ’ ಎಂದು ಬರೆಯಲಾಗಿದೆ. ಇದರ ಅರ್ಥಕ್ಕಾಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ನೆರೆ ಹೊರೆಯವರ ಹೇಳಿಕೆಯನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. ‘ಶೋಭಿತಾ ಸಾವಿಗೆ ಖಿನ್ನತೆ ಕಾರಣವೇ? ಪತಿಯೊಂದಿಗೆ ಭಿನ್ನಾಭಿಪ್ರಾಯ ಇತ್ತೇ’ ಎಂಬ ನಿಟ್ಟಿನಲ್ಲೂತನಿಖೆ ನಡೆಯುತ್ತಿದೆ.
ಶೋಭಿತಾ ಮದುವೆ ಬಳಿಕ ಧಾರಾವಾಹಿ ಹಾಗೂ ಸಿನಿಮಾಗಳಿಂದ ದೂರ ಉಳಿದಿದ್ದರು. ಈ ವಿಚಾರವಾಗಿ ಪೊಲೀಸರು ಪತಿ ಸುಧೀರ್ ರೆಡ್ಡಿಯನ್ನು ಪ್ರಶ್ನೆ ಮಾಡುತ್ತಿದ್ದಾರೆ. ಸುಧೀರ್ ರೆಡ್ಡಿ ಮೂರು ದಿನಗಳ ಹಿಂದೆ ಗೋವಾಕ್ಕೆ ತೆರಳಿದ್ದರು. ಆತ್ಮಹತ್ಯೆಗೂ ಮುನ್ನ ಶೋಭಿತಾ ತಮ್ಮ ಸಹೋದರಿಯೊಂದಿಗೆ ಮಾತುಕತೆ ಮಾಡಿದ್ದರು. ‘ನನಗೆ ತುಂಬಾ ಖುಷಿಯಾಗಿದೆ. 2 ವಾರದ ನಂತರ ಊರಿಗೆ ಬರುತ್ತೇನೆ’ ಎಂದು ಸಹೋದರಿ ಬಳಿ ಹೇಳಿಕೊಂಡಿದ್ದರು. ಆದರೆ, ಈಗ ಅವರ ಶವವಾಗಿ ಊರಿಗೆ ಬರುತ್ತಿರುವುದು ಬೇಸರದ ಸಂಗತಿ.
ಸದ್ಯ ಹೈದರಾಬಾದ್‌ನಲ್ಲಿ ಶೋಭಿತಾ ಮೃತದೇಹ ಇದೆ. ಈಗಾಗಲೇ ಮರಣೋತ್ತರ ಪರೀಕ್ಷೆ ಕೂಡ ಆಗಿದೆ. ಆ ಬಳಿಕ ಬೆಂಗಳೂರಿಗೆ ಮೃತದೇಹ ಸ್ಥಾಳಾಂತರಗೊಳ್ಳುವ ಸಾಧ್ಯತೆ ಇದೆ.