ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
ದರ್ಶನ್ ಗ್ಯಾಂಗ್ ಜಾಮೀನು ಅರ್ಜಿ ವಿಚಾರಣೆ ಡಿಸೆಂಬರ್ 6ಕ್ಕೆ ಮುಂದೂಡಿಕೆ
ಅನಾರೋಗ್ಯದ ಕಾರಣದಿಂದ ಮಧ್ಯಂತರ ಜಾಮೀನು ಪಡೆದಿರುವ ದರ್ಶನ್ ಅವರು ರೆಗ್ಯುಲರ್ ಬೇಲ್ ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಅದೇ ರೀತಿ, ಪವಿತ್ರಾ ಗೌಡ, ನಾಗರಾಜ್, ಲಕ್ಷ್ಮಣ್ ಮುಂತಾದ ಆರೋಪಿಗಳು ಕೂಡ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಹೈಕೋರ್ಟ್ನಲ್ಲಿ ವಾದ-ಪ್ರತಿವಾದ ನಡೆಯುತ್ತಿದೆ. ಸದ್ಯಕ್ಕೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳ ಜಾಮೀನು ಅರ್ಜಿಯ ವಿಚಾರಣೆಯನ್ನು ಡಿಸೆಂಬರ್ 6ಕ್ಕೆ ಮುಂದೂಡಿಕೆ ಮಾಡಲಾಗಿದೆ. ಇದರಿಂದ ಇನ್ನಷ್ಟು ದಿನಗಳ ಕಾಲ ಪವಿತ್ರಾ ಗೌಡ ಅವರು ಜೈಲಿನಲ್ಲಿ ಇರಬೇಕಾಗಿದೆ.
ದರ್ಶನ್ ಪರವಾಗಿ ಹಿರಿಯ ಲಾಯರ್ ಸಿ.ವಿ. ನಾಗೇಶ್ ಅವರು ಇತ್ತೀಚೆಗೆ ಹೈಕೋರ್ಟ್ನಲ್ಲಿ ವಾದ ಮಂಡನೆ ಮಾಡಿದ್ದರು. ಇಂದು (ಡಿ.3) ಪವಿತ್ರಾ ಗೌಡ ಪರವಾಗಿ ಹಿರಿಯ ವಕೀಲ ಸೆಬಾಸ್ಟಿಯನ್ ಅವರು ವಾದಿಸಿದ್ದಾರೆ. ಪವಿತ್ರಾ ಗೌಡ ಅವರಿಗೆ ಕೊಲೆ ಮಾಡುವ ಉದ್ದೇಶ ಇರಲಿಲ್ಲ. ಎಲ್ಲರೂ ಹೊಡೆದ ಕಾರಣದಿಂದ ರೇಣುಕಾಸ್ವಾಮಿ ಸಾವು ಸಂಭವಿಸಿರಬಹುದು ಎಂದು ವಾದ ಮಾಡಲಾಗಿದೆ.
ಆರೋಪಿಗಳ ಪರವಾಗಿ ವಕೀಲರ ವಾದ ಮಂಡನೆ ಅಂತ್ಯವಾಗಿದೆ. ಡಿಸೆಂಬರ್ 6ರಂದು ಎಸ್ಪಿಪಿ ಪ್ರಸನ್ನ ಕುಮಾರ್ ಅವರು ವಾದ ಮಾಡಲಿದ್ದಾರೆ. ಆ ಬಳಿಕ ಜಾಮೀನಿಗೆ ಸಂಬಂಧಿಸಿದ ತೀರ್ಪನ್ನು ಹೈಕೋರ್ಟ್ ನೀಡಲಿದೆ. ಪವಿತ್ರಾ ಗೌಡ ಅವರು ಪರಪ್ಪನ ಅಗ್ರಹಾರದಲ್ಲಿ ಜೈಲುವಾಸ ಅನುಭವಿಸುತ್ತಿದ್ದಾರೆ. ಒಂದು ವೇಳೆ ಜಾಮೀನು ಸಿಗದಿದ್ದರೆ ಅವರ ಜೈಲುವಾಸ ಮುಂದುವರಿಯಲಿದೆ.
ದರ್ಶನ್ಗೆ ಬಳ್ಳಾರಿ ಜೈಲಿನಲ್ಲಿ ಇದ್ದಾಗ ಬೆನ್ನು ನೋವು ಕಾಣಿಸಿಕೊಂಡಿತ್ತು. ಆದ್ದರಿಂದ ಅವರಿಗೆ ಶಸ್ತ್ರ ಚಿಕಿತ್ಸೆ ಅಗತ್ಯ ಇದೆ ಎಂದು ವೈದ್ಯರು ಸಲಹೆ ನೀಡಿದ್ದರಿಂದ ಮಧ್ಯಂತರ ಜಾಮೀನು ನೀಡಲಾಗಿತ್ತು. ಆದರೆ ಈವರೆಗೂ ಅವರು ಶಸ್ತ್ರ ಚಿಕಿತ್ಸೆ ಮಾಡಿಸಿಲ್ಲ. ಬಿಪಿ ವ್ಯತ್ಯಾಸ ಆಗುತ್ತಿರುವುದರಿಂದ ಶಸ್ತ್ರ ಚಿಕಿತ್ಸೆಯನ್ನು ಸದ್ಯಕ್ಕೆ ಮಾಡಿಲ್ಲ ಎಂಬ ಮಾಹಿತಿ ಇದೆ. ದರ್ಶನ್ ಅವರಿಗೆ ಕೆಂಗೇರಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.