ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ತಾಜ್‌ಮಹಲ್ ಸ್ಫೋಟಿಸುವುದಾಗಿ ಹುಸಿ ಬಾಂಬ್ ಬೆದರಿಕೆ
ಲಖನೌ: ತಾಜ್ ಮಹಲ್ ಸ್ಫೋಟಿಸುವುದಾಗಿ ಉತ್ತರ ಪ್ರದೇಶ ಪ್ರವಾಸೋದ್ಯಮ ಇಲಾಖೆಗೆ ಮಂಗಳವಾರ ಇಮೇಲ್ ಮೂಲಕ ಬೆದರಿಕೆ ಬಂದಿದ್ದು, ಪರಿಶೀಲನೆ ನಂತರ ಇದು ಹುಸಿ ಬಾಂಬ್ ಬೆದರಿಕೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ.
ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನ ದಳವನ್ನು ಪ್ರೇಮಸೌಧ ತಾಜ್ ಮಹಲ್ ಅನ್ನು ತೀವ್ರ ತಪಾಸಣೆಗೆ ಒಳಪಡಿಸಿದ್ದು, ಅನುಮಾನಾಸ್ಪದವಾಗಿ ಏನೂ ಪತ್ತೆಯಾಗಿಲ್ಲ ಎಂದು ಸಹಾಯಕ ಪೊಲೀಸ್ ಕಮಿಷನರ್ ಸಯ್ಯದ್ ಅರೀಬ್ ಅಹ್ಮದ್ ಅವರು ತಿಳಿಸಿದ್ದಾರೆ.
“ತಾಜ್ ಮಹಲ್ ಅನ್ನು ಸ್ಫೋಟಿಸುವು ಬೆದರಿಕೆ ಇರುವ ಇಮೇಲ್ ಅನ್ನು ಉತ್ತರ ಪ್ರದೇಶ ಪ್ರವಾಸೋದ್ಯಮ ಕಚೇರಿ ಸ್ವೀಕರಿಸಿದೆ. ಈ ಕುರಿತು ಇಲಾಖೆಯವರು ನಮಗೆ ಮಾಹಿತಿ ನೀಡಿದ ನಂತರ ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ ಮತ್ತು ಇತರ ತಂಡಗಳು ತಾಜ್ ಮಹಲ್ ಅನ್ನು ಪರಿಶೀಲನೆ ನಡೆಸಿದ್ದು, ಇದು ಹುಸಿ ಬಾಂಬ್ ಬೆದರಿಕೆ ಎಂದು ಅಹ್ಮದ್ ಅವರು ANIಗೆ ತಿಳಿಸಿದ್ದಾರೆ.
ಈ ಸಂಬಂಧ ತಾಜಗಂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ನಕಲಿ ಇಮೇಲ್ ಕಳುಹಿಸಿದ ವ್ಯಕ್ತಿಯನ್ನು ಪತ್ತೆಹಚ್ಚಲು ತನಿಖೆ ನಡೆಯುತ್ತಿದೆ.