ಬಿಜೆಪಿ ನೇತೃತ್ವದ ಹೊಸ ಮಹಾಯುತಿ ಸರ್ಕಾರದಲ್ಲಿ ಉಪಮುಖ್ಯಮಂತ್ರಿ ಸ್ಥಾನವನ್ನು ವಹಿಸಿಕೊಳ್ಳಲು ಏಕನಾಥ್ ಶಿಂಧೆ ಒಪ್ಪಿಕೊಂಡಿದ್ದಾರೆ ಎಂದು ಇಂಡಿಯಾ ಟುಡೇ ಮತ್ತು ನ್ಯೂಸ್ 18 ವರದಿ ಮಾಡಿವೆ.
ಶಿಂಧೆ ಮತ್ತು ಫಡ್ನವಿಸ್ ನಡುವೆ ನಿನ್ನೆ ನಡೆದ ಒಂದು ಗಂಟೆ ಅವಧಿಯ ಸಭೆಯ ವಿವರಗಳು ಅಸ್ಪಷ್ಟವಾಗಿದ್ದರೂ, ಕೆಲವು ರಾಜಕೀಯ ವೀಕ್ಷಕರು ಇದನ್ನು ಬಿಜೆಪಿಯು ಶಿವಸೇನೆ ನಾಯಕರನ್ನು ಸಮಾಧಾನಪಡಿಸುವ ಪ್ರಯತ್ನವೆಂದು ಹೇಳಿದ್ದಾರೆ. ಆದರೆ ಇದು ನಾಳೆ ನಡೆಯಲಿರುವ ಪ್ರಮಾಣವಚನ ಸ್ವೀಕಾರ ಸಮಾರಂಭ ಕುರಿತು ಎಂದು ಹೇಳಲಾಗುತ್ತಿದೆ.
ನವೆಂಬರ್ 20 ರಂದು ನಡೆದ ಮಹಾರಾಷ್ಟ್ರ ಚುನಾವಣೆಯಲ್ಲಿ ರಾಜ್ಯದ 288 ವಿಧಾನಸಭಾ ಸ್ಥಾನಗಳಲ್ಲಿ 132 ಸ್ಥಾನಗಳನ್ನು ಬಿಜೆಪಿ ಪಡೆದುಕೊಂಡಿತು, ಅದರ ಮಿತ್ರಪಕ್ಷಗಳಾದ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮತ್ತು ಅಜಿತ್ ಪವಾರ್ ಅವರ ಎನ್‌ಸಿಪಿ ಉಳಿದ ಸ್ಥಾನಗಳನ್ನು ಪಡೆದುಕೊಂಡು ಬಿಜೆಪಿ ನೇತೃತ್ವದ ಮಹಾಯುತಿ ಒಕ್ಕೂಟವು 230 ಸ್ಥಾನಗಳ ಬಹುಮತವನ್ನು ಹೊಂದಿದೆ.