ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ
ದಿಲ್ಲಿಯಲ್ಲಿ ಒಂದೇ ಕುಟುಂಬದ ಮೂವರನ್ನು ಚೂರಿಯಿಂದ ಇರಿದು ಕೊಲೆ
ನವದೆಹಲಿ: ದಕ್ಷಿಣ ದೆಹಲಿಯ ನೆಬ್ ಸರಾಯ್ ಪ್ರದೇಶದಲ್ಲಿ ಬುಧವಾರ ಬೆಳಗ್ಗೆ ಒಂದೇ ಕುಟುಂಬದ ಮೂವರನ್ನು ಬರ್ಬರವಾಗಿ ಹತ್ಯೆಗೈದ ಘಟನೆ ನಡೆದಿದೆ.
ಪತಿ, ಪತ್ನಿ ಮತ್ತು ಮಗಳನ್ನು ಚಾಕುವಿನಿಂದ ಇರಿದು ಹತ್ಯೆಗೈಯಲಾಗಿದೆ. ಹತ್ಯೆಗೀಡಾದವರು ಹರಿಯಾಣ ಮೂಲದ ರಾಜೇಶ್, ಕೋಮಲ ಮತ್ತು ಕವಿತಾ ಎಂದು ತಿಳಿಯಲಾಗಿದೆ.
ಕುಟುಂಬದ ನಾಲ್ಕನೇ ಸದಸ್ಯ ಪುತ್ರ ಬೆಳಗಿನ ಜಾವ ವಾಕಿಂಗ್‌ಗೆ ಹೋಗಿದ್ದ ವೇಳೆ ಕೃತ್ಯ ಎಸಗಲಾಗಿದೆ ಎಂದು ಹೇಳಲಾಗಿದೆ. ಪೊಲೀಸರು ಸ್ಥಳಕ್ಕೆ ದೌಡಾಯಿಸಿ ತನಿಖೆ ನಡೆಸುತ್ತಿದ್ದಾರೆ.
ಹೆಚ್ಚಿನ ವಿವರಗಳಿಗಾಗಿ ಕಾಯಲಾಗುತ್ತಿದೆ ಎಂದು ದೆಹಲಿ ಪೊಲೀಸರಿಂದ ತಿಳಿದು ಬಂದಿದೆ.