ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಜನ ಸಾಮಾನ್ಯರಿಗೆ ನ್ಯಾಯ ಮರೀಚಿಕೆ: ಉಪ ಲೋಕಾಯುಕ್ತ ನ್ಯಾ.ಬಿ.ವೀರಪ್ಪ ಖೇದ
ಉಡುಪಿ: ದೇಶದಲ್ಲಿ ಸ್ವಾತಂತ್ಕ್ಯ ದೊರಕಿ 78ವರ್ಷಗಳಾದರೂ ನಮಗೆ ನಿಜವಾಗಿಯೂ ಸ್ವಾತಂತ್ರ್ಯ ಸಿಕ್ಕಿದೆಯೇ ಎಂಬ ಸಂಶಯ ಕಾಡುತ್ತಿದೆ. ಯಾಕೆಂದರೆ ನಮ್ಮ ಜನರಿಗೆ ಇನ್ನೂ ನ್ಯಾಯ ಸಿಗುತ್ತಿಲ್ಲ. ಆದುದರಿಂದ ಆ ಸ್ವಾತಂತ್ರ್ಯ ಉಳಿಸಲು ನಾವು ಮತ್ತೊಂದು ಸ್ವಾತಂತ್ರ್ಯ ಸಂಗ್ರಾಮವನ್ನು ನಡೆಸಬೇಕೆ ಎಂಬ ಪ್ರಪಶ್ನೆ ಕಾಡುತ್ತಿದೆ ಎಂದು ಕರ್ನಾಟಕ ಉಪ ಲೋಕಾಯುಕ್ತ ನ್ಯಾ.ಬಿ.ವೀರಪ್ಪ ಹೇಳಿದ್ದಾರೆ.
ಉಡುಪಿ ವಕೀಲರ ಸಂಘದ ವತಿಯಿಂದ ಮಂಗಳವಾರ ನ್ಯಾಯಾಲಯದ ಆವರಣದಲ್ಲಿ ಹಮ್ಮಿಕೊಳ್ಳಲಾದ ವಕೀಲರ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡುತ್ತಿದ್ದರು.ಸರಕಾರಿ ಆಸ್ಪತ್ರೆಯ ಔಷಧಿಯಲ್ಲಿ ಭ್ರಷ್ಟಾಚಾರ ಹಾಗೂ ಅಂಗನವಾಡಿಯಲ್ಲಿ ಮಕ್ಕಳು ತಿನ್ನುವ ಆಹಾರದಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ. ಇದಕ್ಕೆಲ್ಲ ಕಾರಣ ಈ ಸಮಾಜ. ಯಾಕೆಂದರೆ ಈ ಸಮಾಜ ಹಣ ತೆಗೆದುಕೊಂಡು ಮತ ಹಾಕುತ್ತಿದೆ. ಇದರಿಂದ ಒಳ್ಳೆಯ ವ್ಯಕ್ತಿಗಳು ಆಯ್ಕೆಯಾಗಿ ಬರುತ್ತಿಲ್ಲ. ನಮ್ಮ ಸಮಾಜ ಬದಲಾಗದೆ ಈ ದೇಶವನ್ನು ಕಟ್ಟಲು ಸಾಧ್ಯವಿಲ್ಲ ಎಂದರು.
ಸಮಾಜದಲ್ಲಿ ಬೇರೂರಿರುವ ಕ್ಯಾನ್ಸರ್‌ನಂತೆ ಅಪಾಯಕಾರಿಯಾಗಿರುವ ಭ್ರಷ್ಟಾಚಾರವನ್ನು ತೊಡೆದು ಹಾಕಲು ಯುವ ವಕೀಲರು ನ್ಯಾಯಾಂಗದ ಸೈನಿಕರಂತೆ ಕೆಲಸ ಮಾಡಬೇಕು ಎಂದ ಅವರು, ನಾವು ಪ್ರಕೃತಿ ವಿರೋಧಿ ಗಳಾಗುತ್ತಿದ್ದೇವೆ. ಪ್ರಕೃತಿಯ ನಾಶದಿಂದ ಪ್ರಾಣಿ- ಮಾನವ ಮಧ್ಯೆ ಸಂಘರ್ಷಗಳು ನಡೆಯುತ್ತಿವೆ ಎಂದು ತಿಳಿಸಿದರು.
ವಕೀಲರ ತಂಡ ಗ್ರಾಮ, ಆಸ್ಪತ್ರೆ, ಹಾಸ್ಟೆಲ್‌ಗಳಿಗೆ ಹೋಗಿ ಕಾನೂನು ಅರಿವು ಮೂಡಿಸುವ ಕಾರ್ಯ ಮಾಡಬೇಕು. ಯಾಕೆಂದರೆ ಈ ದೇಶದಲ್ಲಿ ಶೇ.90 ರಷ್ಟು ಮಂದಿ ಶಿಕ್ಷಿತರೇ ಅಪರಾಧವನ್ನು ಎಸಗುತ್ತಿದ್ದಾರೆ. ವರ್ಷಕ್ಕೆ ಸುಪ್ರೀಂ ಕೋರ್ಟಿನಲ್ಲಿ 70ಸಾವಿರ, ದೇಶದ 25 ಹೈಕೋರ್ಟ್‌ಗಳಲ್ಲಿ 20ಲಕ್ಷ ಸೇರಿದಂತೆ ಒಟ್ಟು ದೇಶದಲ್ಲಿ 1.65ಕೋಟಿ ವ್ಯಾಜ್ಯಗಳು ಇತ್ಯರ್ಥಗೊಳ್ಳುತ್ತಿವೆ. ಸದ್ಯ5 ಕೋಟಿ ವ್ಯಾಜ್ಯಗಳು ಇತ್ಯರ್ಥಕ್ಕೆ ಬಾಕಿ ಇದೆ ಎಂದರು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಸುಪ್ರೀಂ ಕೋರ್ಟಿನ ವಿಶ್ರಾಂತ ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಮಾತನಾಡಿ, ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ವಕೀಲರು ಬಹಳ ಮಹತ್ವದ ಪಾತ್ರ ವಹಿಸಿದ್ದರು.ಯುವ ವಕೀಲರು ತಮ್ಮ ಜ್ಞಾನ ವನ್ನು ವೃದ್ಧಿಸಿಕೊಳ್ಳಬೇಕು. ಸಮಾಜದಲ್ಲಿ ನ್ಯಾಯ ನೆಲೆ ಯೂರುವಂತೆ ಮಾಡುವ ಜವಾಬ್ದಾರಿ ವಕೀಲರ ಮೇಲೆ ಇದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಹೈಕೋರ್ಟಿನ 2025ನೇ ಸಾಲಿನ ಕ್ಯಾಲೆಂಡರನ್ನು ಹೋಲುವ ಸಂಘದಿಂದ ಹೊರತಂದಿರುವ ನೂತನ ಕ್ಯಾಲೆಂಡರನ್ನು ಬಿಡುಗಡೆ ಮಾಡಲಾಯಿತು. ನ್ಯಾಯಾಲಯ ಮತ್ತು ಸಂಘದ ಶತಮಾನೋತ್ತರ ರಜತ ಮಹೋತ್ಸವಕ್ಕೆ ಸಹಕರಿಸಿದ ನ್ಯಾಯಾಧೀಶರು, ಸರಕಾರಿ ಅಭಿಯೋಜಕರು, ವಕೀಲರ ಸಂಘದ ಸದಸ್ಯರನ್ನು ಗೌರವಿಸಲಾಯಿತು.
ಅಧ್ಯಕ್ಷತೆಯನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಿರಣ್ ಎಸ್. ಗಂಗಣ್ಣವರ್ ವಹಿಸಿದ್ದರು. ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್ ಸ್ವಾಗತಿಸಿದರು. ನ್ಯಾಯವಾದಿ ಶ್ರೀನಿಧಿ ಹೆಗ್ಡೆ ಮುಖ್ಯ ಅತಿಥಿಗಳನ್ನು ಪರಿಚಯಿಸಿ ದರು. ಪ್ರಧಾನ ಕಾರ್ಯದರ್ಶಿ ರಾಜೇಶ್ ಎ.ಆರ್. ವಂದಿಸಿದರು. ನ್ಯಾಯವಾದಿ ಸಹನಾ ಕುಂದರ್ ಕಾರ್ಯದರ್ಶಿ ರಾಜೇಶ್ ಎ.ಆರ್. ವಂದಿಸಿದರು. ನ್ಯಾಯವಾದಿ ಸಹನಾ ಕುಂದರ್ ಕಾರ್ಯಕ್ರಮ ನಿರೂಪಿಸಿದರು.