ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ....ಚಿತ್ತಾಪುರದಲ್ಲಿ RSS ಪಥ ಸಂಚಲನ: ವಿವಿಧ ಸಂಘಟನೆಗಳಿಗೆ ಪ್ರತ್ಯೇಕ ದಿನಾಂಕ ನಿಗದಿಪಡಿಸುವಂತೆ ಹೈಕೋರ್ಟ್ ಆದೇಶ
ಉಡುಪಿ ವಕೀಲರ ಸಂಘವು ಹೊರ ತಂದಿರುವ 2025ನೇ ಸಾಲಿನ ನೂತನ ಕ್ಯಾಲೆಂಡರ್ ಬಿಡುಗಡೆ
ಉಡುಪಿ:ಕರ್ನಾಟಕ ಉಚ್ಚ ನ್ಯಾಯಾಲಯದ 2025 ನೇ ಸಾಲಿನ ಕ್ಯಾಲೆಂಡರ್ ಅನ್ನು ಹೋಲುವ ಉಡುಪಿ ವಕೀಲರ ಸಂಘದ ಅಧ್ಯಕ್ಷರಾದ ಶ್ರೀ ರೆನೋಲ್ಡ್ ಪ್ರವೀಣ್ ಕುಮಾರ್ ಇವರ ಪ್ರಾಯೋಜಕತ್ವದಲ್ಲಿ ಉಡುಪಿ ವಕೀಲರ ಸಂಘವು ಹೊರ ತಂದಿರುವ 2025 ನೇ ಸಾಲಿನ ನೂತನ ಕ್ಯಾಲೆಂಡರ್ ಅನ್ನು ಕರ್ನಾಟಕ ರಾಜ್ಯದ ಉಪಲೋಕಾಯುಕ್ತರಾದ ನ್ಯಾಯಮೂರ್ತಿ ಶ್ರೀ ಬಿ ವೀರಪ್ಪ ಇವರು ಡಿಸೆಂಬರ್ ತಾ. 3ರಂದು ಉಡುಪಿ ನ್ಯಾಯಾಲಯ ಆವರಣದಲ್ಲಿ ಜರುಗಿದ ವಕೀಲರ ದಿನಾಚರಣೆ ಸಮಾರಂಭದಲ್ಲಿ ಬಿಡುಗಡೆಗೊಳಿಸಿದರು.