ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಮಣಿಪಾಲ: ಬಿಯರ್ ಬಾಟಲಿಯಿಂದ ಹೊಡೆದು ಹೊಟೇಲ್ ಕಾರ್ಮಿಕನ ಹತ್ಯೆ
ಉಡುಪಿ: ಮಣಿಪಾಲದ ಮುಖ್ಯರಸ್ತೆಯ ಅನಂತ ಕಲ್ಯಾಣ ಮಾರ್ಗದಲ್ಲಿ ಹೊಟೇಲ್ ಕಾರ್ಮಿಕನನ್ನು ಬಿಯರ್ ಬಾಟಲಿಯಿಂದ ಹೊಡೆದು ಹತ್ಯೆಗೈದ ಘಟನೆ ಇಂದು ಬೆಳಿಗ್ಗೆ ನಡೆದಿದೆ.
ಹತ್ಯೆಯಾದ ವ್ಯಕ್ತಿ ಹೊನ್ನಾವರದ ಕಾಸಕೋಡು ನಿವಾಸಿ ಶ್ರೀಧರ ನಾಯಕ ಎಂದು ಗುರುತಿಸಲಾಗಿದೆ. ಈತ ಮಣಿಪಾಲ ಈಶ್ವರನಗರದ ಹೊಟೇಲ್ ಒಂದರಲ್ಲಿ ಕುಕ್ ಎಂದು ಪೊಲೀಸರು ತಿಳಿಸಿದ್ದಾರೆ.
ಮೂರರಿಂದ ನಾಲ್ಕು ಜನರಿದ್ದ ತಂಡ ಬೆಳಿಗ್ಗೆ 6ರ ಸುಮಾರಿಗೆ ಹೊಡೆದಾಟ ನಡೆಸುತ್ತಿದ್ದರು ಎಂದು ಸ್ಥಳೀಯರು ತಿಳಿಸಿದ್ದು, ಯಾವುದೋ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಶ್ರೀಧರ್ ಅವರನ್ನು ತಂಡ ಬಿಯರ್ ಬಾಟಲಿಯಲ್ಲಿ ಹೊಡೆದು ಹತ್ಯೆಗೈದಿದ್ದಾರೆ ಎಂದು ಉಡುಪಿ ಎಸ್ಪಿ ಡಾ. ಅರುಣ್ ಕುಮಾರ್ ತಿಳಿಸಿದ್ದಾರೆ.
ಸ್ಥಳಕ್ಕೆ ಎಸ್ಪಿ ಡಾ.ಅರುಣ್ ಕುಮಾರ್ , ಮಣಿಪಾಲ ಇನ್ಸ್ಪೆಕ್ಟರ್ ದೇವರಾಜ್ , ಮಂಜುನಾಥ್ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.