ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಡಿವೈಡರ್ ಗೆ ಕಾರು ಡಿಕ್ಕಿ: ಪರೀಕ್ಷೆಗೆ ತೆರಳುತ್ತಿದ್ದ 5 ವಿದ್ಯಾರ್ಥಿಗಳು ಸೇರಿ 7 ಮಂದಿ ಸಾವು
ಗುಜರಾತ್ : ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ವಿದ್ಯಾರ್ಥಿಗಳು ಸೇರಿ 7 ಮಂದಿ ಸಾವನ್ನಪ್ಪಿರುವ ಘಟನೆ ಗುಜರಾತಿನ ಜುನಾಗಢದಲ್ಲಿ ನಡೆದಿದೆ. ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಐವರು ಕಾಲೇಜು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.
ವೇಗವಾಗಿ ಬಂದ ವಿದ್ಯಾರ್ಥಿಗಳ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ರಸ್ತೆಯ ಇನ್ನೊಂದು ಬದಿಗೆ ಪಲ್ಟಿಯಾಗಿದೆ ಮತ್ತು ವೇಗವಾಗಿ ಬಂದ ಎರಡನೇ ಕಾರಿಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಏಳು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಐವರು ವಿದ್ಯಾರ್ಥಿಗಳು ಒಂದು ಕಾರಿನಲ್ಲಿ ಪರೀಕ್ಷೆಗಾಗಿ ಕಾಲೇಜಿಗೆ ತೆರಳುತ್ತಿದ್ದರೆ, ಇನ್ನಿಬ್ಬರು ಮೃತರು ಮತ್ತೊಂದು ಕಾರಿನಲ್ಲಿದ್ದರು. ಅಪಘಾತದ ಪರಿಣಾಮ ಎರಡೂ ಕಾರುಗಳು ಗುರುತು ಹಿಡಿಯಲಾಗದಷ್ಟು ಜಖಂಗೊಂಡಿವೆ.