ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
ನಿಯಮ ಉಲ್ಲಂಘನೆ, ಡ್ರಗ್ಸ್ ಮಾರಾಟ: 292 ಫಾರ್ಮಸಿಗಳ ಪರವಾನಗಿ ರದ್ದು, ದಿನೇಶ್ ಗುಂಡೂರಾವ್ ಮಾಹಿತಿ
ಬೆಳಗಾವಿ, ಡಿಸೆಂಬರ್ 10: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು 2023-24ನೇ ಸಾಲಿನಲ್ಲಿ ನಿಯಮಾವಳಿ ಉಲ್ಲಂಘನೆ, ಮಾದಕ ದ್ರವ್ಯಗಳ ಅಕ್ರಮ ಮಾರಾಟ ಮತ್ತು ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿರುವ 292 ಫಾರ್ಮಸಿಗಳ ಪರವಾನಗಿಯನ್ನು ಹಿಂಪಡೆದಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಇಲಾಖೆ ಅಧಿಕಾರಿಗಳು ನಡೆಸಿದ ತಪಾಸಣೆ ವೇಳೆ, ಅಕ್ರಮ ಎಸಗಿರುವುದು ಪತ್ತೆಯಾದ ಕಾರಣ 1,245 ಫಾರ್ಮಸಿಗಳ ಪರವಾನಗಿಯನ್ನು ಅಮಾನತುಗೊಳಿಸಲಾಗಿದೆ ಎಂದು ಅವರು ವಿಧಾನ ಪರಿಷತ್ತಿಗೆ ತಿಳಿಸಿದ್ದಾರೆ.
ಬಳ್ಳಾರಿ ಬಾಣಂತಿಯರ ಸಾವು ತೀವ್ರ ಚರ್ಚೆಗೆ ಗ್ರಾಸವಾಗಿರುವ ಸಂದರ್ಭದಲ್ಲೇ ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿರುವ, ನಿಯಮಾವಳಿ ಉಲ್ಲಂಘನೆ, ಮಾದಕ ದ್ರವ್ಯಗಳ ಮಾರಾಟ ಮಾಡುತ್ತಿರುವ ಫಾರ್ಮಸಿಗಳ ಬಗ್ಗೆ ಸಚಿವರು ವಿಧಾನ ಪರಿಷತ್ತಿಗೆ ಮಾಹಿತಿ ನೀಡಿದ್ದಾರೆ.
ಸಚಿವರು ನೀಡಿರುವ ಮಾಹಿತಿ ಪ್ರಕಾರ ರಾಜ್ಯದಲ್ಲಿ 37,130 ಖಾಸಗಿ ಫಾರ್ಮಸಿಗಳಿವೆ. ನಾವು 20 ಫಾರ್ಮಸಿಗಳ ವಿರುದ್ಧ ಕಾನೂನು ಕ್ರಮ ಆರಂಭಿಸಿದ್ದೇವೆ ಮತ್ತು 6 ಕಂಪನಿಗಳಿಗೆ ಶಿಕ್ಷೆಯನ್ನು ಪ್ರಕಟಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
2022-23 ಮತ್ತು 2023-24ರ ಅವಧಿಯಲ್ಲಿ ಮಾದಕ ದ್ರವ್ಯಗಳ ಅಕ್ರಮ ಮಾರಾಟಕ್ಕಾಗಿ 89 ಫಾರ್ಮಸಿಗಳ ವಿರುದ್ಧ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ಮಾದಕ ದ್ರವ್ಯಗಳ ಅಕ್ರಮ ಮಾರಾಟದ ಅನುಮಾನದ ಮೇಲೆ 699 ಫಾರ್ಮಸಿಗಳ ಮೇಲೆ ದಾಳಿ ನಡೆಸಿ ತಪಾಸಣೆ ನಡೆಸಲಾಗಿತ್ತು. 89 ಫಾರ್ಮಸಿಗಳ ಪರವಾನಗಿಗಳನ್ನು ಅಮಾನತುಗೊಳಿಸಲಾಗಿದೆ ಮತ್ತು 23 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಗುಂಡೂರಾವ್ ತಿಳಿಸಿದ್ದಾರೆ.
ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಗಳ ಕೊರತೆ ಕುರಿತು ಪ್ರತಿಪಕ್ಷದ ಸದಸ್ಯರು ಪ್ರಸ್ತಾಪಿಸಿದ ವಿಷಯಕ್ಕೆ ಪ್ರತಿಕ್ರಿಯಿಸಿದ ಸಚಿವರು, ಅಗತ್ಯ ಔಷಧಗಳನ್ನು ಖರೀದಿಸಲು ಆಸ್ಪತ್ರೆಗಳಲ್ಲಿ ಸಾಕಷ್ಟು ಹಣವಿದೆ. ಔಷಧಿಗಳ ಕೊರತೆಯಾಗದಂತೆ 2 ವರ್ಷಗಳಿಗೊಮ್ಮೆ ಕೆಎಸ್ಎಂಎಸ್ಸಿಎಲ್ ಮೂಲಕ ಟೆಂಡರ್ ಕರೆಯಲು ನಾವು ನಿರ್ಧರಿಸಿದ್ದೇವೆ ಎಂದು ಹೇಳಿದ್ದಾರೆ.