Mumbai: ಜನರ ಮೇಲೆ ನುಗ್ಗಿದ ಬಸ್; ಮೃತರ ಸಂಖ್ಯೆ 7ಕ್ಕೆ ಏರಿಕೆ, 5 ಲಕ್ಷ ರೂ ಪರಿಹಾರ ಘೋಷಣೆ
ಮುಂಬೈ: ಮುಂಬೈ ಕುರ್ಲಾ ರೈಲು ನಿಲ್ದಾಣದ ಬಳಿ ಸೋಮವಾರ ತಡರಾತ್ರಿ ಸಂಭವಿಸಿದ ಬಸ್ ಅಪಘಾತ ಪ್ರಕರಣದಲ್ಲಿ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.
ಬೃಹನ್ ಮುಂಬೈ ವಿದ್ಯುತ್ ಸರಬರಾಜು ಮತ್ತು ಸಾರಿಗೆ ಸಂಸ್ಥೆಯ (ಬೆಸ್ಟ್) ಬಸ್’ನ ಬ್ರೇಕ್ ಫೇಲ್ ಆಗಿ ಪಾದಚಾರಿಗಳು ಹಾಗೂ ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿತ್ತು. ಪರಿಣಾಮ ಘಟನೆಯಲ್ಲಿ 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.
ಬಸ್ ಮೇಲಿನ ನಿಯಂತ್ರಣವನ್ನು ಚಾಲಕ ಕಳೆದುಕೊಂಡಿದ್ದ. ವೇಗದಲ್ಲಿ ಬಸ್ ಚಲಿಸಿದ್ದು, ಅಪಘಾತ ಸಂಬಭೆ ಎಂದು ಬೆಸ್ಟ್ ನಿರ್ವಾಹಕರು ಹೇಳಿಕೆ ನೀಡಿದ್ದಾರೆ.
ಇನ್ನು ಘಟನೆ ಬಗ್ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ತೀವ್ರ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ ಮಾಡಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಕುರ್ಲಾದಲ್ಲಿ ನಡೆದ ಬೆಸ್ಟ್ ಬಸ್ ಅಪಘಾತದಲ್ಲಿ ಕೆಲವರ ಸಾವು ಸಂಭಿಸಿದ್ದು, ಅತೀವ್ರ ದುಃಖ ತಂದಿದೆ. ಮೃತರ ಕುಟುಂಬಕ್ಕೆ ಸಂತಾಪ ಸೂಚಿಸುತ್ತೇನೆ. ‘ಗಾಯಾಳುಗಳ ವೈದ್ಯಕೀಯ ವೆಚ್ಚವನ್ನು ಬೃಹನ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಮತ್ತು ಬೃಹನ್ ಮುಂಬೈ ವಿದ್ಯುತ್ ಸರಬರಾಜು ಮತ್ತು ಸಾರಿಗೆ (ಬೆಸ್ಟ್) ಸಂಸ್ಥೆಯು ಭರಿಸಲಿದೆ ಎಂದು ಹೇಳಿದ್ದಾರೆ.
ಇದೇ ವೇಳೆ ಮೃತರ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 5 ಲಕ್ಷ ರೂಪಾಯಿ ಆರ್ಥಿಕ ನೆರವು ನೀಡುವುದಾಗಿಯೂ ತಿಳಿಸಿದ್ದಾರೆ.
ಈ ದುರದೃಷ್ಟಕರ ಘಟನೆಯಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳೊಂದಿಗೆ ನಾವು ನಿಂತಿದ್ದೇವೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ. ‘ಸಂತ್ರಸ್ತರಿಗೆ ಮತ್ತು ಅವರ ಕುಟುಂಬಗಳಿಗೆ ತ್ವರಿತ ನೆರವು ಸಿಗುವಂತೆ ಮಾಡಲು ಅಗತ್ಯ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.