ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ
ಉಳ್ಳಾಲ: ಕಾರು ಢಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಮಹಿಳೆ ಸ್ಥಳದಲ್ಲೇ ಮೃತ್ಯು
ಉಳ್ಳಾಲ: ರಾಷ್ಟ್ರೀಯ ಹೆದ್ದಾರಿ 66ರ ಆಡಂಕುದ್ರಿನ ಬಳಿ ಕಾರು ಢಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಢಿಕ್ಕಿ ಹೊಡೆದ ಕಾರು ಮತ್ತು ಓವರ್‌ಟೇಕ್ ಮಾಡುತ್ತಿದ್ದ ಇನ್ನೊಂದು ಕಾರು ಕಮರಿಗೆ ಉರುಳಿ ಬಿದ್ದಿದೆ ಎನ್ನಲಾಗಿದೆ.
ಸಾವನ್ನಪ್ಪಿದವರು ಸೇವಂತಿಗುಡ್ಡೆಯ ನಿವಾಸಿ ಕೃಷ್ಣಪ್ಪ ಅವರ ಪತ್ನಿ ಬೇಬಿ (65) ಎಂದು ತಿಳಿದು ಬಂದಿದೆ.
ಆಡಂಕುದ್ರಿನಲ್ಲಿ ಅಂಗಡಿ ಹೊಂದಿದ್ದ ಅವರು ಸಂಜೆ ಪಂಪ್‌ವೆಲ್‌ನ ಅಪಾರ್ಟ್ ಮೆಂಟ್‌ನಲ್ಲಿ ಕೆಲಸಕ್ಕೆ ತೆರಳಲು ರಸ್ತೆ ದಾಟುತ್ತಿದ್ದಾಗ ಘಟನೆ ನಡೆದಿದೆ. ಓವರ್‌ಟೇಕ್ ಭರದಲ್ಲಿದ್ದ ತೊಕ್ಕೊಟ್ಟಿನಿಂದ ಮಂಗಳೂರು ಕಡೆ ಸಂಚರಿಸುತ್ತಿದ್ದ ಎರಡು ಕಾರುಗಳಲ್ಲಿ ಒಂದು ಕಾರು ಮಹಿಳೆಗೆ ಢಿಕ್ಕಿಯಾಗಿದೆ.
ದಕ್ಷಿಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪೊಲೀಸರು ತನಿಖೆ ನಡೆಸುತ್ತಿದ್ದಾರೆ.