ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ
ಸಕಲ ಸರಕಾರಿ ಗೌರವಗಳೊಂದಿಗೆ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅಂತ್ಯಕ್ರಿಯೆ
ಮಂಡ್ಯ : ರಾಜ್ಯದ ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವರಾಗಿದ್ದ ಎಸ್.ಎಂ.ಕೃಷ್ಣ ಅವರ ಅಂತ್ಯಕ್ರಿಯೆ ಮದ್ದೂರಿನ ಸೋಮನಹಳ್ಳಿಯ ಕಾಫಿ ಡೇ ಆವರಣದಲ್ಲಿ ಸಕಲ ಸರಕಾರಿ ಗೌರವಗಳೊಂದಿಗೆ ಬುಧವಾರ ನೆರವೇರಿತು.
ಕುಶಾಲು ತೋಪು ಹಾರಿಸುವ ಮೂಲಕ ಪೊಲೀಸರು, ಎಸ್.ಎಂ.ಕೃಷ್ಣ ಅವರಿಗೆ ಗೌರವ ನಮನ ಸಲ್ಲಿಸಿದರು. ಒಕ್ಕಲಿಗ ಸಂಪ್ರದಾಯಕ್ಕೆ ಅನುಗುಣವಾಗಿ ಅವರ ಅಂತ್ಯ ಸಂಸ್ಕಾರ ನೆರವೇರಿತು.
ಎಸ್.ಎಂ.ಕೃಷ್ಣ ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ಬುಧವಾರ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಯಡಿಯೂರಪ್ಪ ಸೇರಿದಂತೆ ಹಲವು ಗಣ್ಯರು ಪಡೆದುಕೊಂಡರು.ಜನಪ್ರತಿನಿಧಿಗಳು, ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಮತ್ತು ಸಾರ್ವಜನಿಕರು ಎಸ್.ಎಂ.ಕೃಷ್ಣ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು.
ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಸದಾಶಿವನಗರದ ಸ್ವಗೃಹದಲ್ಲಿ ಮಂಗಳವಾರ ಬೆಳಗಿನ ಜಾವ 2.30ರ ಸುಮಾರಿಗೆ ನಿಧನರಾಗಿದ್ದರು. ಅವರಿಗೆ 93 ವರ್ಷ ವಯಸ್ಸಾಗಿತ್ತು. ಕೆಲಕಾಲದಿಂದ ವಯೋ ಸಹಜ ಅನಾರೋಗ್ಯದಿಂದ ಬಳಲುತಿದ್ದ ಕೃಷ್ಣ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದರು. ಆದರೆ ಮಂಗಳವಾರ ಅವರು ಕೊನೆಯುಸಿರೆಳೆದಿದ್ದರು.