ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ಹಿಂದುಳಿದ ವರ್ಗಗಳ ಮೀಸಲಾತಿಗೆ ಆಗ್ರಹ: ಬಿಜೆಪಿ ಬೆಂಬಲ, ಪಂಚಮಸಾಲಿಗರ ಹೋರಾಟ ತೀವ್ರ!

ಬೆಂಗಳೂರು: ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ ಹಿಂದುಳಿದ ವರ್ಗಗಳ 2A ಪಟ್ಟಿಗೆ ಸೇರಿಸಬೇಕು ಎಂದು ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಗೆ ಪ್ರತಿಪಕ್ಷ ಬಿಜೆಪಿ ಬೆಂಬಲ ವ್ಯಕ್ತಪಡಿಸಿದ್ದು, ಹೋರಾಟ ಮತ್ತಷ್ಟು ತೀವ್ರಗೊಂಡಿದೆ. ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಮೀಸಲಾತಿಗಾಗಿ ಹೋರಾಟ ನಡೆಯುತ್ತಿದ್ದು, ಮಂಗಳವಾರ ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ಮಾಡಲಾಗಿತ್ತು.

ಪ್ರಸ್ತುತ ಪಂಚಮಸಾಲಿ ಲಿಂಗಾಯತರು ಪ್ರವರ್ಗ 3 ಬಿ ಮೀಸಲಾತಿಯನ್ನು ಪಡೆದುಕೊಳ್ಳುತ್ತಿದ್ದಾರೆ. ಈ ಸಮುದಾಯವನ್ನು ಪ್ರವರ್ಗ 2 ಎ ಗೆ ಬದಲಾಯಿಸಿ ಮೀಸಲಾತಿ ಕೊಡಬೇಕು ಎಂಬ ಬೇಡಿಕೆ ಇದೆ. ಇದಕ್ಕಾಗಿ ಸರ್ಕಾರದ ಮೇಲೆ ಒತ್ತಡ ತರುತ್ತಿದ್ದಾರೆ.

ಪ್ರತಿಭಟನಾಕಾರರ ಮೇಲೆ ಪೊಲೀಸರ ಲಾಠಿ ಚಾರ್ಜ್ ವಿರೋಧಿಸಿ ಸುವರ್ಣಸೌಧದ ಬಳಿ ಇರುವ ಅಂಬೇಡ್ಕರ್ ಪ್ರತಿಮೆ ಎದುರು ವಿಪಕ್ಷ ನಾಯಕ ಆರ್, ಅಶೋಕ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ವಿಧಾಪರಿಷತ್ ವಿಪಕ್ಷ ನಾಯಕ ಚಲವಾದಿ ನಾರಾಯಣಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತಿತರ ಅನೇಕ ಶಾಸಕರು, ವಿಧಾನಪರಿಷತ್ ಸದಸ್ಯರು ಪಾಲ್ಗೊಂಡರು.

No Comments

Leave A Comment