ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ

ಒಂದು ದೇಶ, ಒಂದು ಚುನಾವಣೆ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

ನವದೆಹಲಿ: ‘ಒಂದು ದೇಶ, ಒಂದು ಚುನಾವಣೆ’ ಮಸೂದೆಗೆ ಕೇಂದ್ರ ಸಚಿವ ಸಂಪುಟ ಗುರುವಾರ ಅನುಮೋದನೆ ನೀಡಿದೆ.

ಇಂದು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಂದು ದೇಶ, ಒಂದು ಚುನಾವಣೆ ಮಸೂದೆಗೆ ಒಪ್ಪಿಗೆ ನೀಡಿದೆ.

ಪ್ರಸ್ತುತ ನಡೆಯುತ್ತಿರುವ ಸಂಸತ್ ಚಳಿಗಾಲದ ಅಧಿವೇಶನದಲ್ಲೇ ಕೇಂದ್ರ ಸರ್ಕಾರ ಒಂದು ದೇಶ, ಒಂದು ಚುನಾವಣೆ ಮಸೂದೆಯನ್ನು ಮಂಡಿಸುವ ಸಾಧ್ಯತೆಯಿದೆ.

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವುದು ಇದರ ಉದ್ದೇಶವಾಗಿದೆ. ಒಂದು ರಾಷ್ಟ್ರ, ಒಂದು ಚುನಾವಣೆ ಕುರಿತು ವರದಿ ಸಲ್ಲಿಸಲು ಕೇಂದ್ರ ಸರ್ಕಾರ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಿತ್ತು.

ರಾಮನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯ ಶಿಫಾರಸುಗಳನ್ನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಂಗೀಕರಿಸಿದ ವಾರಗಳ ನಂತರ ಈ ಬೆಳವಣಿಗೆ ನಡೆದಿದೆ.

ಲೋಕಸಭೆ, ರಾಜ್ಯ ವಿಧಾನಸಭೆಗಳು ಮತ್ತು ಸ್ಥಳೀಯ ಸಂಸ್ಥೆಗಳಿಗೆ ಹಂತಹಂತವಾಗಿ ಏಕಕಾಲಕ್ಕೆ ಚುನಾವಣೆ ನಡೆಸುವಂತೆ ರಾಮನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿ ಶಿಫಾರಸು ಮಾಡಿದೆ.

No Comments

Leave A Comment