ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಛತ್ತೀಸ್‌ಗಢ: ನಾರಾಯಣಪುರದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಏಳು ಮಾವೋವಾದಿಗಳು ಹತ
ರಾಯ್‌ಪುರ: ದಕ್ಷಿಣ ಛತ್ತೀಸ್‌ಗಢದ ಅಬುಜಮದ್ ಪ್ರದೇಶದ ನಾರಾಯಣಪುರ-ದಂತೇವಾಡದ ಅಂತರ ಜಿಲ್ಲಾ ಗಡಿಯಲ್ಲಿ ಗುರುವಾರ ನಡೆದ ಭೀಕರ ಎನ್‌ಕೌಂಟರ್‌ನಲ್ಲಿ ಕನಿಷ್ಠ ಏಳು ಮಾವೋವಾದಿ(ಸಿಪಿಐ)ಗಳನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ.
“ದಕ್ಷಿಣ ಅಬುಜ್ಮದ್(ಅಪರಿಚಿತ ಭೂಮಿ) ಪ್ರದೇಶದಲ್ಲಿ ಮಾವೋವಾದಿಗಳ ಉಪಸ್ಥಿತಿಯ ಕುರಿತು ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ, ಜಿಲ್ಲಾ ಮೀಸಲು ಗಾರ್ಡ್(ಡಿಆರ್‌ಜಿ), ವಿಶೇಷ ಕಾರ್ಯಪಡೆ(ಎಸ್‌ಟಿಎಫ್) ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ(ಸಿಆರ್‌ಪಿಎಫ್) ಜಂಟಿಯಾಗಿ ಶೋಧ ಕಾರ್ಯಾಚರಣೆ ಆರಂಭಿಸಿದ್ದವು.
ನವೆಂಬರ್ 10 ರಂದು ಆರಂಭವಾದ ಮಾವೋವಾದಿ ವಿರೋಧಿ ಶೋಧ ಕಾರ್ಯಾಚರಣೆ ಮುಂದುವರಿಯುತ್ತಿದ್ದು, ನವೆಂಬರ್ 12 ರಂದು ಬೆಳಗಿನ ಜಾವ 3 ಗಂಟೆಗೆ ಮಾವೋವಾದಿಗಳು ತಮ್ಮ ಸ್ಥಳದ ಸಮೀಪಕ್ಕೆ ಬಂದ ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ ನಂತರ ಎನ್‌ಕೌಂಟರ್ ನಡೆಯಿತು ಎಂದು ಬಸ್ತಾರ್‌ನ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇಲ್ಲಿಯವರೆಗೆ, ಎನ್‌ಕೌಂಟರ್ ಸ್ಥಳದಿಂದ ಏಳು ಮಾವೋವಾದಿಗಳ ಶವಗಳನ್ನು ವಶಪಡಿಸಿಕೊಳ್ಳಲಾಗಿದೆ. ಆದರೆ ವಶಪಡಿಸಿಕೊಂಡ ಮಾವೋವಾದಿಗಳ ಮೃತದೇಹಗಳ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಅವರು ಹೇಳಿದ್ದಾರೆ.
ಈ ಪ್ರದೇಶದಲ್ಲಿ ಮಾವೋವಾದಿಗಳು ಗುಂಪು ಗುಂಪಾಗಿ ಸೇರುತ್ತಿದ್ದರು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.