ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

Pushpa-2: ನೂಕುನುಗ್ಗಲಿನಲ್ಲಿ ಮಹಿಳೆ ಸಾವು; ಕುಟುಂಬಕ್ಕೆ ಅಲ್ಲು ಅರ್ಜುನ್ 25 ಲಕ್ಷ ರೂ ನೆರವು ಘೋಷಣೆ

ಹೈದರಾಬಾದ್: ಪುಷ್ಪ-2: ದಿ ರೂಲ್ ಸಿನಿಮಾದ ಪ್ರೀಮಿಯರ್ ಶೋ ವೇಳೆಯಲ್ಲಿ ಉಂಟಾದ ನೂಕುನುಗ್ಗಲಿನಲ್ಲಿ ಉಸಿರುಗಟ್ಟಿ ಸಾವನ್ನಪ್ಪಿದ್ದ ಮಹಿಳೆಯ ಕುಟುಂಬಕ್ಕೆ ರೂ. 25 ಲಕ್ಷ ಆರ್ಥಿಕ ನೆರವನ್ನು ನಟ ಅಲ್ಲು ಅರ್ಜುನ್ ಘೋಷಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ವಿಡಿಯೋ ಫೋಸ್ಟ್ ಮಾಡಿರುವ ಅಲ್ಲು ಅರ್ಜುನ್, ಈ ನೋವಿನ ಪರಿಸ್ಥಿತಿಯಲ್ಲಿ ದುಃಖಿತ ಕುಟುಂಬಕ್ಕೆ ಅವರು ಒಬ್ಬಂಟಿಯಾಗಿಲ್ಲ ಎಂದು ಭರವಸೆ ನೀಡಲು ಬಯಸುತ್ತೇನೆ. ಅವರ ಕುಟುಂಬವನ್ನು ವೈಯಕ್ತಿಕವಾಗಿ ಭೇಟಿಯಾಗುವುದಾಗಿ ಹೇಳಿದ್ದಾರೆ.
ನಾವು ಏನೇ ಮಾಡಿದರೂ, ಈ ನಷ್ಟವನ್ನು ತುಂಬಿಸಲಾಗದು. ನಾವು ಭಾವನಾತ್ಮಕವಾಗಿ ನಿಮ್ಮೊಂದಿಗೆ ಇದ್ದೇವೆ ಎಂದು ಹೇಳಲು ಬಯಸುತ್ತೇನೆ. ನಿಮಗೆ ಏನೇ ಸಹಾಯ ಬೇಕಾದರೂ ನಾವಿದ್ದೇವೆ.ಸಂತ್ರಸ್ತೆಯ ಮಕ್ಕಳ ಭವಿಷ್ಯಕ್ಕಾಗಿ ನನ್ನ ಪರವಾಗಿ ರೂ. 25 ಲಕ್ಷ ನೆರವು ನೀಡಲು ಬಯಸುತ್ತೇನೆ. ಯಾವುದೇ ರೀತಿಯ ನೆರವಿಗೂ ಅವರೊಂದಿಗೆ ಇರುತ್ತೇನೆ ಎಂದು ಹೇಳಿ ಸಂತಾಪ ಸೂಚಿಸಿದ್ದಾರೆ.

ಬುಧವಾರ ಪುಷ್ಪ 2 ಪ್ರೀಮಿಯರ್ ಶೋ ವೇಳೆ ಇಲ್ಲಿನ ಸಂಧ್ಯಾ ಚಿತ್ರಮಂದಿರಕ್ಕೆ ಬಂದಿದ್ದ ನಟ ಅಲ್ಲು ಅರ್ಜುನ್ ಅವರನ್ನು ನೋಡಲು ಭಾರಿ ಸಂಖ್ಯೆಯಲ್ಲಿ ಅಭಿಮಾನಿಗಳು ಸೇರಿದ್ದರಿಂದ ಉಂಟಾದ ನೂಕುನುಗ್ಗಲಿನಲ್ಲಿ 35 ವರ್ಷದ ಮಹಿಳೆ ಮೃತಪಟ್ಟಿದ್ದರು. ಅವರ 9 ವರ್ಷದ ಮಗ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

No Comments

Leave A Comment