ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
ವಿಟ್ಲ: ಗಂಡ-ಹೆಂಡತಿ ಜಗಳ; ಗಂಭೀರ ಗಾಯಗೊಂಡಿದ್ದ ಹೆಂಡತಿ ಚಿಕಿತ್ಸೆ ಫಲಿಸದೆ ಸಾವು
ವಿಟ್ಲ: ಡಿ.13,ಗಂಡ ಹೆಂಡತಿ ಜಗಳದಲ್ಲಿ ಹೆಂಡತಿಯನ್ನು ದೂಡಿ ಹಾಕಿದ ಪರಿಣಾಮ ಗಂಭೀರ ಗಾಯಗೊಂಡ ಮಹಿಳೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ವಿಟ್ಲ ಸಮೀಪದ ಪುಣಚದಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ದೇವಿನಗರ ನಿವಾಸಿ ಲೀಲಾ (45) ಎಂದು ಗುರುತಿಸಲಾಗಿದೆ.
ಪ್ರತಿದಿನ ಕುಡಿದು ಬಂದು ಗಲಾಟೆ ಮಾಡುತಿದ್ದ ಸಂಜೀವ ಮೊನ್ನೆ ಕೂಡ ಗಲಾಟೆ ಮಾಡಿ ಹೆಂಡತಿಯನ್ನು ದೂಡಿ ಹಾಕಿದ್ದಾನೆ ಎಂಬ ಆರೋಪ ಸದ್ಯ ಸಾರ್ವಜನಿಕ ವಲಯದಿಂದ ಕೇಳಿಬಂದಿದೆ. ಮಾಹಿತಿ ತಿಳಿದ ಸ್ಥಳೀಯರು ಕೂಡಲೇ ಮಹಿಳೆಯನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ರವಾನಿಸಿದ್ದಾರೆ. ಇದೀಗ ನಿನ್ನೆ ಮುಂಜಾನೆ ಲೀಲಾರವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಮೃತರು ಓರ್ವ ಪುತ್ರಿಯನ್ನು ಅಗಲಿದ್ದಾರೆ. ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ವಿಟ್ಲ ಪೊಲೀಸರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ. ಮೊದಲಿಗೆ ಈ ಪ್ರಕರಣ ಸಹಜ ಸಾವಿನಂತಿದ್ದರೂ ಪೊಲೀಸ್ ತನಿಖೆ ಬಳಿಕ ಇದು ಕೊಲೆ ಎಂದು ಶಂಕಿಸಲಾಗಿದೆ. ಹೀಗಾಗಿ ಆರೋಪಿ ಸಂಜೀವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.