ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಅತುಲ್​ ಸುಭಾಷ್​ ಆತ್ಮಹತ್ಯೆ ಪ್ರಕರಣ: ಪತ್ನಿ, ಭಾಮೈದ ಸೇರಿ ಮೂವರ ಬಂಧನ

ಬೆಂಗಳೂರು: ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರತ್ತಹಳ್ಳಿ ಪೊಲೀಸರು ಮೂವರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ.

ಬಂಧಿತರನ್ನು ಅತುಲ್ ಪತ್ನಿ, ಎ1 ಆರೋಪಿ ನಿಖಿತಾ ಸಿಂಘಾನಿಯ,​ ಅತ್ತೆ ಎ2 ಆರೋಪಿ ನಿಶಾ ಸಿಂಘಾನಿಯಾ, ಭಾಮೈದ ಎ3 ಆರೋಪಿ ಅನುರಾಗ್​ನನ್ನು ಪೊಲೀಸರು ಬಂಧಿಸಿ ತಡರಾತ್ರಿ ಬೆಂಗಳೂರಿಗೆ ಕರೆತಂದಿದ್ದಾರೆ.

ಹರಿಯಾಣದ ಗುರುಗ್ರಾಮದಲ್ಲಿ ಅತುಲ್ ಪತ್ನಿ ನಿಖಿತಾಳನ್ನು ಬಂಧಿಸಲಾಗಿದ್ದು, ಉತ್ತರ ಪ್ರದೇಶದ ಅಲಹಾಬಾದ್​ನಲ್ಲಿ ನಿಶಾ ಹಾಗೂ ಅನುರಾಗ್​ನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಮೂವರು ಆರೋಪಿಗಳನ್ನೂ ಪೊಲೀಸರು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಎಲ್ಲರಿಗೂ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಪತ್ನಿ ಕಿರುಕುಳಕ್ಕೆ ಬೇಸತ್ತು ಟೆಕ್ಕಿ ಅತುಲ್ ಸುಭಾಷ (34 ವರ್ಷ) ಡೆತ್​ನೋಟ್​ ಬರೆದಿಟ್ಟು ಡಿಸೆಂಬರ್​ 9ರಂದು ಬೆಂಗಳೂರಿನ ಮಂಜುನಾಥ ಲೇಔಟ್​ನ ಪ್ಲಾಟ್​ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ಆತ್ಮಹತ್ಯೆ ಮಾಡಿಕೊಳ್ಳುವ ಮುಂಚೆ ತನಗೆ ಪತ್ನಿ ಮತ್ತು ಆಕೆಯ ಸಂಬಂಧಿಕರು ನೀಡಿರುವ ಕಿರುಕುಳದ ಬಗ್ಗೆ 90 ನಿಮಿಷಗಳ ವಿಡಿಯೋ ಮಾಡಿ, ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಹರಿಬಿಟ್ಟಿದ್ದರು. ಈ ಸಂಬಂಧ ಮಾರತ್ತಹಳ್ಳಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

kiniudupi@rediffmail.com

No Comments

Leave A Comment