ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ
ಕಾಪು: ಉದ್ಯಾವರದ ಯುವಕ ಆತ್ಮಹತ್ಯೆ
ಕಾಪು: ಡಿ.15: ವೈಯಕ್ತಿಕ ಕಾರಣದಿಂದ ಮನನೊಂದ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಉದ್ಯಾವರ ಬೊಳ್ಜೆ ಎಂಬಲ್ಲಿ ರವಿವಾರ ಬೆಳಗಿನ ಜಾವ ನಡೆದಿದೆ.
ಮೃತನನ್ನು ಬೊಳ್ಜೆಯ ಆದಿತ್ಯ(24) ಎಂದು ಗುರುತಿಸಲಾಗಿದೆ. ಈತ ಕಳೆದ ವರ್ಷ ಅಪಘಾತದಲ್ಲಿ ಮೃತಪಟ್ಟ ತನ್ನ ಸ್ನೇಹಿತ ಸುಕ್ಷಿತ್ ಹೆಸರಿನಲ್ಲಿ ಕ್ರಿಕೆಟ್ ತಂಡವನ್ನು ಕಟ್ಟಿದ್ದರು.
ಅಲ್ಲದೆ ಪೆರಂಪಳ್ಳಿಯಲ್ಲಿ ನಿನ್ನೆ ರಾತ್ರಿ ನಡೆದ ಕ್ರಿಕೆಟ್ ಪಂದ್ಯಾಟದಲ್ಲೂ ಇವರು ಭಾಗವಹಿಸಿದ್ದರು. ಅಲ್ಲಿಂದ ಮನೆಗೆ ಬಂದ ಆದಿತ್ಯ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.