ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಉಡುಪಿ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ

ಉಡುಪಿ:ಉಡುಪಿ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಇತ್ತೀಚೆಗೆ ನಡೆಯಿತು. ಅಧ್ಯಕ್ಷತೆಯನ್ನು ವಹಿಸಿದ್ದ ಶಾಸಕ ಯಶಪಾಲ ಸುವರ್ಣ ವಿದ್ಯಾರ್ಥಿಗಳು ಎಲ್ಲಾ ರಂಗಗಳಲ್ಲಿ ತೊಡಗಿಸಿ ಕೊಂಡಾಗ ಆತ್ಮವಿಶ್ವಾಸ ವೃದ್ಧಿಯಾಗುತ್ತದೆ, ಸಾಧನೆ ಸುಲಭವಾಗುತ್ತದೆ. ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲೆಯ ವಿದ್ಯಾರ್ಥಿನಿಯರು ಅಧ್ಯಯನದಲ್ಲಿ ಮೇಲುಗೈ ಸಾಧಿಸಿದಂತೆಯೇ ಪಠ್ಯೇತರ ಚಟುವಟಿಕೆಗಳಲ್ಲಿ ಸಾಧನೆ ತೋರುತ್ತಿರುವುದು ಶ್ಲಾಘನೀಯ. ಶಾಲೆ ಹೀಗೆಯೇ ಅಭಿವೃದ್ಧಿಯ ಪಥದಲ್ಲಿ ಸಾಗಲಿ ಎಂದು ಆಶಿಸಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಉಡುಪಿ ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಪ್ರೌಢಾವಸ್ಥೆಯಲ್ಲಿಯೇ ವಿದ್ಯಾರ್ಥಿಗಳು ಪೋಷಕರೊಂದಿಗೆ ಚರ್ಚಿಸಿ ಮುಂದಿನ ಗುರಿಯನ್ನು ನಿರ್ಧರಿಸಿಕೊಂಡು ಅಧ್ಯಯನದಲ್ಲಿ ತೊಡಗಬೇಕು. ಮನಸ್ಸನ್ನು ವಿಚಲಿತಗೊಳಿಸುವ ಸಮೂಹ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳನ್ನು ಅಗತ್ಯವಿದ್ದಷ್ಟು ಮಾತ್ರ ಬಳಸಿಕೊಂಡು ಮುಂದುವರಿಯಬೇಕು. ಗುರಿ ಮುಟ್ಟುವವರೆಗೆ ಸ್ಪರ್ಧಾತ್ಮಕತೆಯನ್ನು ಉಳಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ನಗರಸಭಾ ಸದಸ್ಯೆ ರಶ್ಮಿ ಸಿ ಭಟ್, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಾರುತಿ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಗಣಪತಿ ಕೆ, ಮಣಿಪಾಲ ಸೆಲ್ಕೋ ಸಂಸ್ಥೆಯ ನಿರ್ದೇಶಕ ರಘುನಾಥ್ ಶೆಟ್ಟಿ ಅತಿಥಿಗಳಾಗಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಶಾಲೆಯಲ್ಲಿ ನೂತನವಾಗಿ ನಿರ್ಮಿಸಿರುವ ವಿವೇಕ ಕೊಠಡಿಯನ್ನು ಮಾನ್ಯ ಶಾಸಕರು ಉದ್ಘಾಟಿಸಿದರು. ಪ್ರಾಂಶುಪಾಲರಾದ ಜಗದೀಶ್ ಕುಮಾರ್, ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷೆ ನಿರುಪಮಾ ಪ್ರಸಾದ್ ಶೆಟ್ಟಿ, ಶಿಕ್ಷಣ ಸ್ಥಾಯಿ ಸಮಿತಿಯ ಅಧ್ಯಕ್ಷ ಯೋಗೀಶ್ ಕೋಟ್ಯಾನ್, ಸದಸ್ಯರಾದ ವಿಶ್ವನಾಥ ಬಾಯರಿ, ಶೇಖರ್ ಕೋಟ್ಯಾನ್, ರತ್ನಾಕರ್, ಎಸ್ ಡಿ ಎಂ ಸಿ ಯ ಅಧ್ಯಕ್ಷೆ, ನವ್ಯ ನಾಯಕ್, ತಾರಾ ದೇವಿ, ನಾಗೇಶ್, ಇನ್ನಿತರರು ಉಪಸ್ಥಿತರಿದ್ದರು.

ಸಭಾ ಕಾರ್ಯಕ್ರಮದ ಅನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಪ್ರೌಢಶಾಲಾ ವಿದ್ಯಾರ್ಥಿನಿಯರಿಂದ ಜಾಂಬವತಿ ಕಲ್ಯಾಣ ಎಂಬ ಪ್ರಸಂಗದ ಯಕ್ಷಗಾನ ಪ್ರದರ್ಶನ ನಡೆಯಿತು.

ಪ್ರಾಂಶುಪಾಲ ಜಗದೀಶ್ ಕುಮಾರ್ ಸ್ವಾಗತಿಸಿದರು. ಪ್ರೌಢಶಾಲಾ ಮುಖ್ಯಸ್ಥೆ ಇಂದಿರಾ ಬಿ ಮತ್ತು ಹಿರಿಯ ಉಪನ್ಯಾಸಕಿ ಡಾ. ಸುಮಾ ವರದಿ ವಾಚನಗೈದರು.‌ ಶಿಕ್ಷಕ ರಾಮಚಂದ್ರ ಭಟ್ ನಿರೂಪಿಸಿ, ವಿಜ್ಞಾನ ಶಿಕ್ಷಕಿ ಜ್ಯೋತಿ ವಂದನಾರ್ಪಣೆಗೈದರು.

No Comments

Leave A Comment