ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ
ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ
ಮಂಗಳೂರು:ಡಿ.15: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟೀಯ ಸಂಸ್ಥೆ 2023ನೇ ವರ್ಷದಲ್ಲಿ ರಾಷ್ಟ್ರ ಮಟ್ಟದಲ್ಲಿ ನೀಡುವ ‘ಮೆಸೇಂಜರ್ ಆಫ್ ಪೀಸ್ ಸ್ಟಾರ್ ಅವಾರ್ಡ್’ ಪ್ರಶಸ್ತಿಗೆ ಕರ್ನಾಟಕದ 8 ಮಂದಿ ಆಯ್ಕೆಯಾಗಿದ್ದು, ಈ ಪೈಕಿ ಮೂವರು ದ.ಕ. ಜಿಲ್ಲೆಯವರು.
ವಯಸ್ಕರ ವಿಭಾಗದಲ್ಲಿ ದ.ಕ. ಜಿಲ್ಲಾ ಸ್ಕೌಟ್ಸ್-ಗೈಡ್ಸ್ ಕೋಶಾಧಿಕಾರಿ ನವೀನ್ ಚಂದ್ರ ಅಂಬೂರಿ, ದ.ಕ. ಜಿಲ್ಲೆಯ ಭಾರತ್ ಸ್ಕೌಟ್ಸ್ ಗೈಡ್ಸ್ ರಾಜ್ಯ ಸಹಾಯಕ ಸಂಘಟನಾ ಆಯುಕ್ತ ಭರತ್ ರಾಜ್ ಕೆ. ಹಾಗೂ ಯುವ ವಿಭಾಗದಲ್ಲಿ ಪುತ್ತೂರು ಸೈಂಟ್ ಫಿಲೋಮಿನಾ ಕಾಲೇಜಿನ ರೋವರ್ ಸ್ಕೌಟ್ಸ್ ಲೀಡರ್ ಚಂದ್ರಾಕ್ಷ ಪ್ರಶಸ್ತಿ ಪಡೆದಿರುತ್ತಾರೆ ಎಂದು ಭಾರತ ಸೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಪ್ರಕಟನೆ ತಿಳಿಸಿದೆ.