ಶ್ವೇತಭವನದಲ್ಲಿ ಪಾಕ್ ಸೇನಾ ಮುಖ್ಯಸ್ಥ ಮುನೀರ್ ಗೆ ಟ್ರಂಪ್ ಔತಣ: ಮೋದಿ ಆಲಿಂಗನಕ್ಕೆ ದೊಡ್ಡ ಹೊಡೆತ - ಕಾಂಗ್ರೆಸ್....
ಸ್ಕೂಟರ್‌ನಲ್ಲಿ ಅಡಗಿಸಿಟ್ಟಿದ್ದ ಬಾಂಬ್ ಸ್ಫೋಟ: ರಷ್ಯಾದ ಪರಮಾಣು ರಕ್ಷಣಾ ಪಡೆ ಮುಖ್ಯಸ್ಥ ಲೆಪ್ಟಿನೆಂಟ್ ಜನರಲ್ ಇಗೊರ್ ಕಿರಿಲ್ಲೋವ್ ಸಾವು!
ಮಾಸ್ಕೋ: ರಷ್ಯಾದ ಪರಮಾಣು, ಜೈವಿಕ ಮತ್ತು ರಾಸಾಯನಿಕ ರಕ್ಷಣಾ ಪಡೆಗಳ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಇಗೊರ್ ಕಿರಿಲ್ಲೋವ್ ಅವರು ಇಂದು ಬೆಳಿಗ್ಗೆ ವಸತಿ ಅಪಾರ್ಟ್ಮೆಂಟ್ ಬ್ಲಾಕ್ ನಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ನಲ್ಲಿ ಅಡಗಿಸಿಟ್ಟಿದ್ದ ಬಾಂಬ್ ಸ್ಫೋಟಗೊಂಡು ಸಾವನ್ನಪ್ಪಿದ್ದಾರೆ. ರಷ್ಯಾದ ತನಿಖಾ ಸಮಿತಿ ಈ ಮಾಹಿತಿ ನೀಡಿದೆ.
ಎಲೆಕ್ಟ್ರಿಕ್ ಸ್ಕೂಟರ್‌ನಲ್ಲಿ ಇರಿಸಲಾಗಿದ್ದ ಬಾಂಬ್ ಸ್ಫೋಟಗೊಂಡಿದೆ. ಇಗೊರ್ ಕಿರಿಲ್ಲೋವ್ ಅವರ ಸಹಾಯಕ ಕೂಡ ಸ್ಫೋಟದಲ್ಲಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಷ್ಯಾದ ತನಿಖಾ ಅಧಿಕಾರಿಗಳು ಇಬ್ಬರ ಸಾವಿಗೆ ಸಂಬಂಧಿಸಿದಂತೆ ಪ್ರಕರಣವನ್ನು ದಾಖಲಿಸಿದ್ದಾರೆ ಎಂದು ಸಮಿತಿಯ ವಕ್ತಾರ ಸ್ವೆಟ್ಲಾನಾ ಪೆಟ್ರೆಂಕೊ ತಿಳಿಸಿದ್ದಾರೆ.
ತನಿಖಾಧಿಕಾರಿಗಳು, ಫೋರೆನ್ಸಿಕ್ ತಜ್ಞರು ಮತ್ತು ಕಾರ್ಯಾಚರಣೆಯ ಸೇವೆಗಳು ಘಟನಾ ಸ್ಥಳದಲ್ಲಿ ಬೀಡುಬಿಟ್ಟಿದ್ದಾರೆ ಎಂದು ಪೆಟ್ರೆಂಕೊ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಈ ಕೃತ್ಯದ ಸುತ್ತಲಿನ ಎಲ್ಲಾ ಘಟನಾವಳಿಗಳನ್ನು ತಿಳಿಯಲು ತನಿಖೆ ಮತ್ತು ಶೋಧ ಕಾರ್ಯಾಚರಣೆಗಳನ್ನು ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.
2022ರ ಫೆಬ್ರವರಿಯಲ್ಲಿ ಉಕ್ರೇನ್‌ನಲ್ಲಿ ಪ್ರಾರಂಭವಾದ ರಷ್ಯಾದ ಮಿಲಿಟರಿ ಕಾರ್ಯಾಚರಣೆಯ ಸಮಯದಲ್ಲಿ ನಿಷೇಧಿತ ರಾಸಾಯನಿಕ ಶಸ್ತ್ರಾಸ್ತ್ರಗಳನ್ನು ಬಳಸಿದ ಆರೋಪದ ಮೇಲೆ ಡಿಸೆಂಬರ್ 16ರಂದು ಕಿರಿಲ್ಲೋವ್‌ಗೆ ಉಕ್ರೇನಿಯನ್ ನ್ಯಾಯಾಲಯವು ಗೈರು ಹಾಜರಿ ಶಿಕ್ಷೆ ವಿಧಿಸಿತು.