ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ
ವಿಶ್ವ ಚೆಸ್ ಚಾಂಪಿಯನ್ ಗುಕೇಶ್‌ಗೆ ತಮಿಳುನಾಡು ಸರ್ಕಾರದಿಂದ 5 ಕೋಟಿ ರೂ. ಬಹುಮಾನ ಘೋಷಣೆ
ಚೆನ್ನೈ:ಡಿ.17.ವಿಶ್ವ ಚೆಸ್ ಚಾಂಪಿಯನ್ ಡಿ.ಗುಕೇಶ್‌ಗೆ ಇಂದು (ಡಿ.17) ತಮಿಳುನಾಡು ಸರ್ಕಾರ ಸನ್ಮಾನ ಸಮಾರಂಭದಲ್ಲಿ, 5 ಕೋಟಿರೂ. ಬಹುಮಾನ ನೀಡಿ ಗೌರವಿಸಿದ್ದಾರೆ.
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ಇಂದು 5 ಕೋಟಿ ರೂ. ಬಹುಮಾನ ಚೆಕ್ ಹಸ್ತಾಂತರಿಸಲಿದ್ದಾರೆ. ಅಭಿನಂದನಾ ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಹಾಗೂ ಚೆಸ್ ದಂತಕಥೆ ವಿಶ್ವನಾಥನ್ ಆನಂದ್ ಸಹ ಭಾಗವಹಿಸಲಿದ್ದಾರೆ.
ಈ ಕುರಿತು ಸಿಎಂ ಎಂ.ಕೆ. ಸ್ಟಾಲಿನ್ ಡಿ.ಗುಕೇಶ್ ಐತಿಹಾಸಿಕ ಸಾಧನೆ ಗುರುತಿಸಿ 5 ಕೋಟಿ ನಗದು ಬಹುಮಾನವನ್ನು ನೀಡುವುದಾಗಿ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದರು.
ಸೋಮವಾರ (ಡಿ.16) ತವರಿಗೆ ಬಂದಿಳಿದದ ಗುಕೇಶ್ ಅವರನ್ನು ಚೆನ್ನೈ ವಿಮಾನ ನಿಲ್ದಾಣದಲ್ಲಿ ಅವರ ಅಭಿಮಾನಿಗಳು ಸೇರಿದಂತೆ ಇನ್ನಿತರರು ಅದ್ದೂರಿಯಾಗಿ ಸ್ವಾಗತಿಸಿದರು.18ರ ಹರೆಯದ ಹುಡುಗ ಗುಕೇಶ್ ವಿಶ್ವ ಚೆಸ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯದಲ್ಲಿ ಚೀನಾದ ಡಿಂಗ್ ಲಿರೆನ್ ಅವರನ್ನು ಸೋಲಿಸಿ ಐತಿಹಾಸಿಕ ಸಾಧನೆ ಮಾಡಿದರು.