ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ಹವಾಮಾನ: ಬಂಗಾಳಕೊಲ್ಲಿ ವಾಯುಭಾರ ಕುಸಿತ; 3 ದಿನಗಳಲ್ಲಿ ಆಂಧ್ರ ಪ್ರದೇಶದಲ್ಲಿ ಭಾರಿ ಮಳೆ, ಬೆಂಗಳೂರು ಸೇರಿ ಕರ್ನಾಟಕದ 5 ಜಿಲ್ಲೆಗಳಲ್ಲಿ ‘ವರ್ಷಧಾರೆ’ ಸಾಧ್ಯತೆ!

ಅಮರಾವತಿ: ಬಂಗಾಳಕೊಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ನೆರಯ ಆಂಧ್ರ ಪ್ರದೇಶದಲ್ಲಿ ಮುಂದಿನ 3 ದಿನಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಕರ್ನಾಟಕದಲ್ಲಿ ಕೂಡ ಬೆಂಗಳೂರು ಸೇರಿದಂತೆ 5 ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬಂಗಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಕಾರಣ ಮುಂದಿನ ಮೂರು ದಿನಗಳ ಕಾಲ ಆಂಧ್ರಪ್ರದೇಶದಲ್ಲಿ ಭಾರಿ ಮಳೆಯಾಗಲಿದ್ದು, ಡಿಸೆಂಬರ್ 18, 19 ಹಾಗೂ 20ರಂದು ಆಂಧ್ರಪ್ರದೇಶದ ಉತ್ತರ ಮತ್ತು ದಕ್ಷಿಣ ಕರಾವಳಿ, ಯಾನಂ ಮತ್ತು ರಾಯಲಸೀಮಾ ಪ್ರದೇಶದಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಬುಧವಾರ ಹೇಳಿದೆ.

ವಾಯುಭಾರ ಕುಸಿತ

ಸರಾಸರಿ ಸಮುದ್ರ ಮಟ್ಟದಿಂದ 5.8 ಕಿ.ಮೀವರೆಗೆ ಚಂಡಮಾರುತ ಪರಿಚಲನೆ ವಿಸ್ತರಿಸಿರುವುದು ದೃಢವಾಗಿದೆ. ಚಂಡಮಾರುತ ಮುಂದಿನ 24 ಗಂಟೆಗಳಲ್ಲಿ ಉತ್ತರ ತಮಿಳುನಾಡು ಮತ್ತು ದಕ್ಷಿಣ ಆಂಧ್ರ ಪ್ರದೇಶ ಕರಾವಳಿಯ ಕಡೆಗೆ ವಾಯವ್ಯವಾಗಿ ಚಲಿಸುವ ಸಾಧ್ಯತೆಯಿದೆ.

ಬಳಿಕ, ಮುಂದಿನ 24 ಗಂಟೆಗಳಲ್ಲಿ ಆಂಧ್ರಪ್ರದೇಶ ಕರಾವಳಿಯುದ್ದಕ್ಕೂ ಉತ್ತರದ ಕಡೆಗೆ ಚಲಿಸುವ ನಿರೀಕ್ಷೆಯಿದೆ. ಡಿಸೆಂಬರ್ 25 ರವರೆಗೆ ಉತ್ತರ ಕರಾವಳಿ ಆಂಧ್ರಪ್ರದೇಶ ಮತ್ತು ಯಾನಂನ ಕೆಲವು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ’ ಎಂದು ಇಲಾಖೆ ಮಾಹಿತಿ ನೀಡಿದೆ.

ಆರೆಂಜ್ ಮತ್ತು ಯೆಲ್ಲೋ ಅಲರ್ಟ್

ಡಿಸೆಂಬರ್ 18 ರಂದು ಕಾಕಿನಾಡ, ಅನಕಾಪಲ್ಲಿ, ವಿಶಾಖಪಟ್ಟಣ, ವಿಜಯನಗರಂ, ಪ್ರಕಾಶಂ, ಎಸ್‌ಪಿಆರ್ ನೆಲ್ಲೂರು, ತಿರುಪತಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಿದ್ದು, ಡಿಸೆಂಬರ್ 19 ರಂದು ಕಾಕಿನಾಡ, ಅನಕಾಪಲ್ಲಿ, ವಿಶಾಖಪಟ್ಟಣಂ, ವಿಜಯನಗರಂಗಳಲ್ಲಿ ಭಾರೀ ಮಳೆಯಾಗುವ ಬಗ್ಗೆ ಆರೆಂಜ್ ಅಲರ್ಟ್ ನೀಡಿದೆ.

ಅಂತೆಯೇ ಮುಂದಿನ 24 ಗಂಟೆಗಳಲ್ಲಿ ಉತ್ತರ ತಮಿಳುನಾಡು ಮತ್ತು ದಕ್ಷಿಣ ಆಂಧ್ರಪ್ರದೇಶದ ಕರಾವಳಿಯ ಕಡೆಗೆ ಇದು ಬಹುತೇಕ ವಾಯುವ್ಯಕ್ಕೆ ಚಲಿಸುವ ಸಾಧ್ಯತೆಯಿದೆ. ನಂತರ, ಮುಂದಿನ 24 ಗಂಟೆಗಳಲ್ಲಿ ಆಂಧ್ರಪ್ರದೇಶ ಕರಾವಳಿಯುದ್ದಕ್ಕೂ ಉತ್ತರಕ್ಕೆ ಚಲಿಸುವ ಸಾಧ್ಯತೆಯಿದೆ.

ತೆಲಂಗಾಣದ ಕರ್ನಾಟಕದಲ್ಲೂ ಮಳೆ:

ಡಿಸೆಂಬರ್ 19-20 ರವರೆಗೆ ತೆಲಂಗಾಣದಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಅಂತೆಯೇ ಡಿಸೆಂಬರ್ 19 ರಂದು ದಕ್ಷಿಣ, ಕರಾವಳಿ ಮತ್ತು ಮಧ್ಯ ಕರ್ನಾಟಕದ ಕೆಲವು ಭಾಗಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ನಿರೀಕ್ಷೆಯಿದೆ.ಪ್ರಮುಖವಾಗಿ ರಾಜಧಾನಿ ಬೆಂಗಳೂರು, ಕೋಲಾರ, ಬೆಂಗಳೂರು ಗ್ರಾಮಾಂತರ, ರಾಮನಗರ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತನ್ನ ಮುನ್ಸೂಚನೆಯಲ್ಲಿ ತಿಳಿಸಿದೆ.ಉತ್ತರದಲ್ಲಿ ಒಣಹವೆಅದೇ ರೀತಿ, ಕರಾವಳಿ ಕರ್ನಾಟಕ ಮತ್ತು ಉತ್ತರ ಒಳನಾಡಿನಲ್ಲಿ ಒಣ ಹವೆ ಮುಂದುವರೆಯುವ ಸಾಧ್ಯತೆಯಿದೆ. ಹೆಚ್ಚುವರಿಯಾಗಿ, ಒಳನಾಡಿನ ಕೆಲವು ಸ್ಥಳಗಳಲ್ಲಿ ಮುಂಜಾನೆ ವೇಳೆ ಮಂಜು ಬೀಳಬಹುದು. ಡಿಸೆಂಬರ್ 20 ರಂದು, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಮತ್ತೆ ಹಗುರ ಮಳೆಯಾಗುವ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಇತರ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

No Comments

Leave A Comment