ಹರಿಯಾಣ, ಗೋವಾ, ಲಡಾಖ್ಗೆ ಹೊಸ ರಾಜ್ಯಪಾಲರ ನೇಮಕ....Poster ಅಂಟಿಸುವ ಮುನ್ನ ಎಚ್ಚರ; Bengaluru Auto Driversಗೆ ಮತ್ತೆ ಶಾಕ್ ಕೊಟ್ಟ RTO ಅಧಿಕಾರಿಗಳು! 5 ಸಾವಿರ ದಂಡ!
ಕ.ರ.ವೇಯ ಪದಾಧಿಕಾರಿಗಳಿ೦ದ ಉಡುಪಿ ಕೆ.ಎಸ್. ಆರ್. ಟಿ.ಸಿ ಬಸ್ ನಿಲ್ದಾಣದಲ್ಲಿ ಇರುವ ಸಮಸ್ಯೆಗೆ ಪರಿಹಾರ ದೊರಕಿಸುವ೦ತೆ ಮನವಿ
ಉಡುಪಿ:ದಿನಾಂಕ-18/12/2024ರ ಬೆಳಿಗ್ಗೆ 11 ಗಂಟೆಗೆ ಸರಿಯಾಗಿ ಉಡುಪಿ ಜಿಲ್ಲಾಧಿಕಾರಿ ಕಚೇರಿಗೆ ಕೆ.ಎಸ್. ಆರ್ ಟಿ.ಸಿ ಬಸ್ ನಿಲ್ದಾಣದಲ್ಲಿ ಇರುವ ಸಮಸ್ಯೆ ಎ ಟಿ ಎಂ ಸೌಲಭ್ಯ ಇಲ್ಲ, ಮಹಿಳೆ ಹಾಗೂ ಪುರುಷರಿಗೆ ಶೌಚಾಲಯಕ್ಕೆ ಹೋಗಲು ರೂ 10/-ತೆಗೆದುಕೊಳ್ಳುತ್ತಾರೆ. ಬಸ್ ನಿಲ್ದಾಣದಲ್ಲಿ ಕೆಲಸ ಮಾಡಲು ಕೇವಲ ಮೂರು ಮಹಿಳೆಯರನ್ನುಇಟ್ಟಿದ್ದಾರೆ. ಪುರುಷರ ಅಗತ್ಯವಿದೆ. ಶುಚಿತ್ವ ಇಲ್ಲದೆ ದುರ್ವಾಸನೆ ಬಂದು ಸಾರ್ವಜನಿಕರಿಗೆ ತೊಂದರೆ ಆಗುತ್ತದೆ.ಬಸ್ ನಿಲ್ದಾಣದಲ್ಲಿ ಏಜೆಂಟರ ಕಾಟ ನಡೆಯುತ್ತಿದೆ.ತುಂಬಾ ಜನ ಫ್ರೀ ಬಸ್ ಎಂದು ಬರುತ್ತಾರೆ.ಅವರ ಬಳಿ ಹಣ ಇರುವುದಿಲ್ಲ.
ಈ ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾಧ್ಯಕ್ಷರಾದ ಸುಜಯ್ ಪೂಜಾರಿಯವರು ಹಾಗೂ ಜಿಲ್ಲಾ ಪದಾಧಿಕಾರಿಗಳು, ಸರ್ವ ಸದಸ್ಯ ರೊಂದಿಗೆ ಉಡುಪಿ ಜಿಲ್ಲಾಧಿಕಾರಿಯಾದ ಕೆ.ವಿದ್ಯಾ ಕುಮಾರಿ ಅವರಿಗೆ ಮನವಿಯನ್ನು ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಮಹಿಳಾ ಅಧ್ಯಕ್ಷರಾದ ಗೀತಾ ಪಾಂಗಾಳ, ಮಹಿಳಾ ಉಪಾಧ್ಯಕ್ಷರಾದ ದೇವಕಿ , ಬ್ರಹ್ಮಾವರ ತಾಲೂಕು ಅಧ್ಯಕ್ಷರಾದ ಸ್ಟಾನಿ ಡಿಸೋಜ, ಜಿಲ್ಲಾ ಮಹಿಳಾ ಪ್ರಧಾನ ಕಾರ್ಯದರ್ಶಿ ಜ್ಯೋತಿ,ಜಿಲ್ಲಾ ಸಂಘಟನಾ ಕಾರ್ಯದರ್ಶಿ ಅಲ್ಫೋನ್ಸ್, ಜಿಲ್ಲಾ ಸಂಸ್ಕೃತಿಕ ಕಾರ್ಯದರ್ಶಿ ಕೃಷ್ಣಕುಮಾರ್, ಜಿಲ್ಲಾ ಮಹಿಳಾ ಕಾರ್ಯದರ್ಶಿ ಚಂದ್ರಕಲಾ, ಜಿಲ್ಲಾ ಮಹಿಳಾ ಜಾಲತಾಣ ಸಂಚಾಲಕಿ ರಶ್ಮಿ, ಜಿಲ್ಲಾ ಸದಸ್ಯರಾದ ಅಶೋಕ್, ಮಲ್ಲು, ಉಪಸ್ಥಿತರಿದ್ದರು.