ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಏಕಾಏಕಿ ಡಿಕ್ಕಿ ಹೊಡೆದ ಬೊಲೆರೋ: ಕೂಲಿ ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ಐವರು ದುರಂತ ಸಾವು

ಕೋಲಾರ, ಡಿಸೆಂಬರ್​ 18: ಮೂರು ದ್ವಿಚಕ್ರ‌ ವಾಹನಕ್ಕೆ ಬೊಲೆರೋ ವಾಹನ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲಿಯೇ ಸಾವನ್ನಪ್ಪಿರುವಂತಹ ಘಟನೆ ಮುಳಬಾಗಿಲು ತಾಲ್ಲೂಕಿನ ಎನ್.ವಡ್ಡಹಳ್ಳಿ-ಗುಡಿಪಲ್ಲಿಗೆ ಹೋಗುವ ಮುಖ್ಯ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ಕೋನಂಗುಂಟೆ ಗ್ರಾಮದ ರಾಧಪ್ಪ (45), ವೆಂಕಟರಾಮಪ್ಪ (45), ವೆಂಕಟರಾಮಪ್ಪ ಪತ್ನಿ ಅಲುವೇಲಮ್ಮ (30) ಹಾಗೂ ಇಬ್ಬರು ಅಪರಿಚಿತರು ಮೃತಪಟ್ಟಿದ್ದಾರೆ. ಕೂಲಿ ಕೆಲಸ ಮಾಡಿಕೊಂಡು ಮನೆಗೆ ಹೋಗುತ್ತಿದ್ದ ಸಮಯದಲ್ಲಿ‌ ಈ ಘಟನೆ ಸಂಭವಿಸಿದ್ದು, ನಂಗಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಅಪರಿಚಿತ ವಾಹನ ಡಿಕ್ಕಿ: ಬೈಕ್ ಸವಾರನಿಗೆ ಗಂಭೀರ ಗಾಯ

ಮತ್ತೊಂದು ಪ್ರಕರಣದಲ್ಲಿ ಕೋಲಾರ ಹೊರವಲಯದ ಶ್ರೀನಿವಾಸಪುರ ರಸ್ತೆಯ ಸೋಲಾರ್ ಸಿಟಿ ಮುಂಭಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನಿಗೆ ಗಂಭೀರ ಗಾಯವಾಗಿರುವಂತಹ ಘಟನೆ ನಡೆದಿದೆ. ಕೋಲಾರದ ಕಡೆಯಿಂದ ಶ್ರೀನಿವಾಸಪುರಕ್ಕೆ ತೆರಳುವ ವೇಳೆ ಅವಘಡ ಸಂಭವಿಸಿದೆ.

ರಸ್ತೆಯಲ್ಲಿದ್ದ ಗುಂಡಿ ತಪ್ಪಿಸಲು ಹೋಗಿ ಅಪಘಾತ ನಡೆದಿದೆ. ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರನ ತಲೆಗೆ ಗಂಭೀರ ಗಾಯವಾಗಿದೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿ ಕಾರು ಡಿಕ್ಕಿಯಾಗಿ ಮಹಿಳೆ ದುರ್ಮರಣ

ಚಾಲಕನ ನಿಯಂತ್ರಣ ತಪ್ಪಿ ಸರಣಿ ಅಪಘಾತ ಸಂಭವಿಸಿದ್ದು, ಕಾರು ಡಿಕ್ಕಿಯಾಗಿ ಮಹಿಳೆ ದುರ್ಮರಣ ಹೊಂದಿರುವಂತಹ ಘಟನೆ ರಾಮನಗರದ ರಾಯರದೊಡ್ಡಿ ಬಳಿ ಸಂಭವಿಸಿದೆ. ಆಟೋದಲ್ಲಿ ಪ್ರಯಾಣಿಸುತ್ತಿದ್ದ ರೂಪಾ(44) ಮೃತ ಮಹಿಳೆ.

ಆಟೋಗೆ ಡಿಕ್ಕಿ ಬಳಿಕ ಹಲವು ವಾಹನಗಳಿಗೆ ಕಾರು ಡಿಕ್ಕೆ ಹೊಡೆದಿದೆ. ಚೇಸ್ ಮಾಡಿ ಕಾರಿನ ಚಾಲಕನನ್ನು ಪೊಲೀಸರು ಹಿಡಿದಿದ್ದು, ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಚಾಲಕ ಮದ್ಯದ ಅಮಲಿನಲ್ಲಿ ಕಾರು ಚಲಾಯಿಸಿರುವ ಆರೋಪ ಮಾಡಲಾಗಿದೆ. ರಾಮನಗರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಟ್ರಾಕ್ಟರ್ ಮತ್ತು ಗ್ಯಾಸ್ ಲಾರಿ ನಡುವೆ ಭೀಕರ ಅಪಘಾತ: ಶಾಲಾ ಮಕ್ಕಳು ಜಸ್ಟ್​ ಮಿಸ್…

ಇಟ್ಟಿಗೆ ತುಂಬಿದ್ದ ಟ್ರಾಕ್ಟರ್ ಮತ್ತು ಗ್ಯಾಸ್ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಕಾರ್ಮಿಕರಿಗೆ ಗಾಯಗಳಾಗಿವೆ. ಅದೃಷ್ಟವಶಾತ್ ಕೂದಲಳತೆ ಅಂತರದಲ್ಲಿ ಭಾರಿ ಅನಾಹುತವೊಂದು ತಪ್ಪಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಶ್ವನಾಥಪುರ ಗ್ರಾಮದ ಬಳಿ ನಡೆದಿದೆ.

ಘಟನೆ ವೇಳೆ ಶಾಲೆ ಮುಗಿಸಿ ಮಕ್ಕಳು ಬರುತ್ತಿದ್ದ ಸಂದರ್ಭದಲ್ಲೇ ಭೀಕರ ಅಪಘಾತ ಸಂಭವಿಸಿದ್ದು, ಶಾಲಾ ಮಕ್ಕಳು ಕೂದಲಳತೆ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳಿಗೆ ದೇವನಹಳ್ಳಿಯ ಸರ್ಕಾರಿ ಆಸ್ವತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

kiniudupi@rediffmail.com

No Comments

Leave A Comment