ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ
ಫರಂಗಿಪೇಟೆ: ಟಯರ್ ಸ್ಫೋಟಗೊಂಡು ಟೆಂಪೋ ಟ್ರಾವೆಲರ್ ಪಲ್ಟಿ
ಬಂಟ್ವಾಳ:ಡಿ.19: ಬೆಂಗಳೂರಿನಿಂದ ಮಂಗಳೂರಿಗೆ ಹೂ ತರುತ್ತಿದ್ದ ಟೆಂಪೋ ಟ್ರಾವೆಲರ್ ಪಲ್ಟಿಯಾದ ಘಟನೆ ಫರಂಗಿಪೇಟೆಯಲ್ಲಿ ಗುರುವಾರ ಮುಂಜಾನೆ 7ಗಂಟೆಯ ವೇಳೆ ನಡೆದಿದೆ.
ಅಡ್ಯಾರ್ ನಲ್ಲಿ ಕಾರ್ಯಕ್ರಮ ನಿಮಿತ್ತ ಹೂ ಅಲಂಕಾರ ನಡೆಸುವುದಕ್ಕಾಗಿ ಬೆಂಗಳೂರಿನಿಂದ ಅಲಂಕಾರಿಕ ಹೂ ತುಂಬಿಸಿಕೊಂಡು ಹೊರಟಿದ್ದ ಟ್ರಾವೆಲರ್ ಫರಂಗಿಪೇಟೆ ಬರುವಷ್ಟರಲ್ಲಿ ಟಯರ್ ಬ್ಲಾಸ್ಟ್ ಆಗಿ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
ವಾಹನದಲ್ಲಿದ್ದ ಹನ್ನೊಂದು ಮಂದಿ ಡೆಕೋರ್ ಕಾರ್ಮಿಕರು ಅದೃಷ್ಟವಶಾತ್ ಯಾವುದೇ ಗಯಾಗಳಾಗದೇ ಪಾರಾಗಿದ್ದಾರೆ. ವಾಹನ ರಸ್ತೆಗೆ ಮಗುಚಿ ಬಿದ್ದು ಅಲಂಕಾರಿಕ ಹೂ ರಸ್ತೆಯಲ್ಲೆಲ್ಲಾ ಚೆಲ್ಲಾಪಿಲ್ಲಿಯಾಗಿದೆ. ಸ್ಥಳಕ್ಕೆ ಬಂಟ್ವಾಳ ಸಂಚಾರ ಠಾಣೆಯ ಪೊಲೀಸರು ಭೇಟಿ ನೀಡಿದ್ದಾರೆ.