ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಸಾರ್ವಜನಿಕರಿಂದ ದೂರು: ಬೆಸ್ಕಾಂ, ಜಲಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು, ಡಿಸೆಂಬರ್​ 19: ಸಾರ್ವಜನಿಕರಿಂದ ದೂರು ಹಿನ್ನೆಲೆಯಲ್ಲಿ ನಗರದ ಎಂ.ಜಿ.ರಸ್ತೆಯ ಬೆಸ್ಕಾಂ ಮತ್ತು ಜಲಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರಿಂದ ದಾಳಿ ಮಾಡಲಾಗಿದೆ. ಬೆಂಗಳೂರಿನಾದ್ಯಂತ 45 ಕಡೆ ಏಕಕಾಲದಲ್ಲಿ ದಾಳಿ ಮಾಡಲಾಗಿದೆ. ಉಪ ಲೋಕಾಯುಕ್ತ ನ್ಯಾ.ಬಿ.ವೀರಪ್ಪ, ಎಸ್‌ಪಿ ವಂಶಿಕೃಷ್ಣ ನೇತೃತ್ವದಲ್ಲಿ ಏಕಕಾಲಕ್ಕೆ ದಾಳಿ ಮಾಡಲಾಗಿದೆ. ಸದ್ಯ ಬೆಸ್ಕಾಂ ಕಚೇರಿಯಲ್ಲಿ ಲೋಕಾಯುಕ್ತ ಪೊಲೀಸರಿಂದ ಕಡತ ಪರಿಶೀಲಿಸಲಾಗುತ್ತಿದೆ.

ಇಂದು ಲೋಕಾಯುಕ್ತ ಅಧಿಕಾರಿಗಳಿಂದ ಬೃಹತ್ ದಾಳಿ ಮಾಡಲಾಗಿದ್ದು, ಸ್ವತಃ ಖುದ್ದು ಲೋಕಾಯುಕ್ತ ಬಿ.ಎಸ್ ಪಾಟೀಲ್ ಫೀಲ್ಡ್ ಗಿಳಿದ್ದರು. ಹಲವು ಬಾರಿ ಎರಡು ಇಲಾಖೆಗಳ ಮೇಲೆ ಲೋಕಾಯುಕ್ತಕ್ಕೆ ದೂರು ಬಂದ ಹಿನ್ನಲೆ ದಾಳಿ ಮಾಡಲಾಗಿದ್ದು, ಈ ಸಂಬಂಧ ಸಾರ್ವಜನಿಕರಿಂದ ಬೆಸ್ಕಾಂ ಮೇಲೆ 83, ಬಿಡ್ಯೂಎಸ್​​ಎಸ್​ಬಿ ಮೇಲೆ‌ 63 ದೂರುಗಳು ಬಂದಿವೆ. ಈ ಸಂಬಂಧ ಸರ್ಚ್ ವಾರೆಂಟ್ ಪಡೆದು ದಾಳಿ ಮಾಡಲಾಗಿದ್ದು, ಭಷ್ಟ್ರಚಾರ, ಅರ್ಜಿ ವಿಲೇವಾರಿಯಲ್ಲಿ ತಡೆ, ಸಾಕಷ್ಟು ಭಷ್ಟ್ರಚಾರ ಆರೋಪ ಕೇಳಿಬಂದಿದೆ.

ಅಧಿಕಾರಿಗೆ ತರಾಟೆ 

ಕ್ರೆಸೆಂಟ್ ಟವರ್​​ನಲ್ಲಿರುವ ಅಧೀಕ್ಷಕ ಎಂಜಿನಿಯರ್ ಕಚೇರಿಯಲ್ಲಿ ಉಪಲೋಕಾಯುಕ್ತ ಕೆ.ಎನ್.ಫಣೀಂದ್ರ ಹಾಗೂ ಅಧಿಕಾರಿಗಳಿಂದ ಪರಿಶೀಲನೆ ಮಾಡಲಾಗಿದೆ. ಅಧಿಕಾರಿಗಳ ರಿಜಿಸ್ಟರ್ ನಿರ್ವಾಹಣೆ ಮಾಡದ ಕಾರ್ಯನಿರ್ವಾಹಕ ಎಂಜಿನಿಯರ್​ ಜಿ.ಎಂ. ಅಮರನಾಥ್ ರೆಡ್ಡಿಗೆ ತರಾಟೆ ತೆಗೆದುಕೊಂಡಿದ್ದಾರೆ.

ಇನ್ನು ಇತ್ತೀಚೆಗೆ ಬೆಂಗಳೂರು ಸೇರಿದಂತೆ ಹಲವೆಡೆ ಲೋಕಾಯುಕ್ತ ದಾಳಿ ಮಾಡಲಾಗಿತ್ತು. ಭ್ರಷ್ಟಾಚಾರ ಮಾಡಿದ್ದಾರೆ ಎಂಬ ಖಚಿತ ಮಾಹಿತಿ ಪಡೆದಿದ್ದ ಲೋಕಾಯುಕ್ತ ಅಧಿಕಾರಿಗಳು ಬೆಳಂಬೆಳಗ್ಗೆ ಬೆಂಗಳೂರು ಸೇರಿ ರಾಜ್ಯದ ಆರು ಜಿಲ್ಲೆಯಲ್ಲಿ ಲೋಕಾಯುಕ್ತ ರೇಡ್ ಮಾಡಿದ್ದರು. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಗದಗ, ಕಲಬುರುಗಿ, ರಾಯಚೂರು, ತುಮಕೂರು ಮತ್ತು ಚಿತ್ರದುರ್ಗದಲ್ಲಿ ದಾಳಿ ನಡೆದಿದ್ದರೆ ಬೆಂಗಳೂರಿನಲ್ಲಿಯೇ 5 ಕಡೆ ದಾಳಿ ನಡೆಸಲಾಗಿತ್ತು.

ಮಾಹಿತಿ ಪ್ರಕಾರ ದೊಡ್ಡ ತಿಮ್ಮಿಂಗಿಲಗಳು ಅಂದರೆ ಅದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಡಿಹೆಚ್​​ಒ, ಸುನಿಲ್ ಕುಮಾರ್ ಮತ್ತು ಡಿಎಸ್​​ಪಿ ನಂಜುಡಯ್ಯ. ನಂಜುಂಡಯ್ಯ ಅವರ ರಾಜಾನುಕುಂಟೆ ಬಳಿ ಇರುವ ನಿವಾಸಕ್ಕೆ ಎಂಟ್ರಿ ಕೊಟ್ಟಿದ್ದ ಲೋಕಾ ಅಧಿಕಾರಿಗಳೇ ಶಾಕ್ ಆಗಿದ್ದರು. ಇದು ಮನೆಯೋ ಅಥವಾ ಅರಮನೆಯೋ ಎಂದು, ಮನೆಯೊಳಗೆ ಐಶಾರಾಮಿ ವ್ಯವಸ್ಥೆ, ಸ್ವಿಮ್ಮಿಂಗ್ ಪೂಲ್, ಜಿಮ್, ಥಿಯೇಟರ್ ನಂತಹ ಐಶಾರಾಮಿ ವ್ಯವಸ್ಥೆ ಮಾಡಿಕೊಂಡಿರುವುದು ಪತ್ತೆಯಾಗಿತ್ತು.

kiniudupi@rediffmail.com

No Comments

Leave A Comment