ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
ಲಕ್ಷ್ಮೀ ಹೆಬ್ಬಾಳ್ಕರ್ಗೆ ಅಶ್ಲೀಲ ಪದದಿಂದ ನಿಂದನೆ ಆರೋಪ : ಸಿಟಿ ರವಿ ವಿರುದ್ಧ ಎಫ್ಐಆರ್
ಬೆಳಗಾವಿ, (ಡಿಸೆಂಬರ್ 19): ಸದನದೊಳಿಗೆ ಅಶ್ಲೀಲ ಪದಿಂದ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ ದೂರಿನ ಮೇಲೆಗೆ ಬಿಜೆಪಿ ಎಂಎಲ್ಸಿ ಸಿಟಿ ರವಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅವಾಚ್ಯಪದ ಬಳಕೆ ಆರೋಪದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಮ್ಮದೇ ಲೆಟರ್‌ಹೆಡ್ ಮೇಲೆ ಹಿರೇಬಾಗೇವಾಡಿ ಪೊಲೀಸ್ ಠಾಣೆಗೆ ದೂರು ಬರೆದುಕೊಟ್ಟಿದ್ದಾರೆ. ಈ ದೂರಿನ ಮೇರೆಗೆ ಇದೀಗ ಸಿಟಿ ರವಿ ವಿರುದ್ಧ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ ಕಾಯ್ದೆ 75 ಮತ್ತು 79ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ. ಹೀಗಾಗಿ ಸಿಟಿ ರವಿ ಅವರನ್ನು ಪೊಲೀಸರು ಬಂಧಿಸುವ ಸಾಧ್ಯತೆಗಳಿವೆ.
ಬೆಳಗಾವಿಯ ಹಿರೇಬಾಗೇವಾಡಿ ಠಾಣೆಯಲ್ಲಿ ಬಿಎನ್‌ಎಸ್ ಕಾಯ್ದೆ 75 ಮತ್ತು 79ಅಡಿಯಲ್ಲಿ ಕೇಸ್ ದಾಖಲಾಗಿದ್ದು. ಲೈಂಗಿಕ ಕಿರುಕುಳ, ಮಹಿಳೆ ಇಚ್ಛೆ ವಿರುದ್ಧ ಅಶ್ಲೀಲತೆ ತೋರುವುದು. ಮಹಿಳೆಯ ನಮ್ರತೆ ಅವಮಾನಿಸುವ ಉದ್ದೇಶದಿಂದ ಸನ್ನೆ, ಪದ ಅಥವಾ ಕ್ರಿಯೆ, ಲೈಂಗಿಕ ಬಣ್ಣದ ಟೀಕೆ ಎಂದು ಎಫ್ಐಆರ್ನಲ್ಲಿ ಉಲ್ಲೇಖವಾಗಿದೆ.
ಈ ಎಫ್ಐಆರ್ ದಾಖಲಾಗುತ್ತಿದ್ದಂತೆಯೇ ಇದೀಗ ಹಿರೇಬಾಗೇವಾಡಿ ಪೊಲೀಸರು, ಬಿಜೆಪಿ ವಿಧಾನಪರಿಷತ್ ಸದಸ್ಯ ಸಿಟಿ ರವಿ ಅವರನ್ನು ಬಂಧಿಸುವ ಸಾಧ್ಯತೆಗಳಿವೆ. ಸದ್ಯ ಸುವರ್ಣ ಸೌಧದಲ್ಲೇ ಇರುವ ಸಿಟಿ ರವಿ ಅವರನ್ನು ಯಾವುದೇ ಸಂದರ್ಭದಲ್ಲೂ ಬಂಧಿಸಬಹುದು.
ರಾಜ್ಯಸಭೆಯಲ್ಲಿ ಅಮಿತ್ ಶಾ ಹೇಳಿಕೆ ಖಂಡಿಸಿ ಪರಿಷತ್‌ನಲ್ಲಿ ಇಂದು ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿದರು. ಈ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್ ಸದಸ್ಯರ ಮಧ್ಯೆ ಮಾತಿನ ಚಕಮಕಿ ನಡೆಯಿತು. ಮಾತಿನ ಚಕಮಕಿ ನಡೆಯವಾಗ ನನ್ನ ವಿರುದ್ಧ ಸಿಟಿ ರವಿ ಅಸಂವಿಧಾನಿಕ ಪದವನ್ನು ಬಳಸಿದ್ದಾರೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಗಂಭೀರ ಆರೋಪ ಮಾಡಿದ್ದಾರೆ. ಇದರಿಂದ ಸದನದಲ್ಲಿ ಭಾರೀ ಕೋಲಾಹಲ ಸೃಷ್ಟಿಯಾಗಿತ್ತು. ಬಳಿಕ ಸುವರ್ಣಸೌಧದಲ್ಲಿ ಕೋಲಾಹಲವೇ ಆಯ್ತು.
ಯಾವಾಗ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎಂದು ಗೊತ್ತಾಗುತ್ತಿದ್ದಂತೆಯೇ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಲಿಗರು ಸಿಟಿ ರವಿ ವಿರುದ್ಧ ಸಿಡಿದೆದ್ದಿದ್ದು, ಅವರ ಕಾರಿಗೆ ಮುತ್ತಿಗೆ ಹಾಕಿದ್ದಾರೆ. ಅಲ್ಲದೇ ಸುವರ್ಣ ಸೌಧಕ್ಕೆ ನುಗ್ಗಿ ಅವರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ.