ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

2025 ಐಸಿಸಿ ಚಾಂಪಿಯನ್ಸ್ ಟ್ರೋಫಿ: ದುಬೈನಲ್ಲಿ ಟೀಂ ಇಂಡಿಯಾದ ಪಂದ್ಯ ಸಾಧ್ಯತೆ!

ದುಬೈ: ಭಾರತವು 2025 ರ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳನ್ನು ತಟಸ್ಥ ಸ್ಥಳದಲ್ಲಿ ಆಡಲಿದೆ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಗುರುವಾರ ಪ್ರಕಟಿಸಿದೆ. 2021ರಲ್ಲಿ ಪಂದ್ಯಾವಳಿಯ ಆತಿಥ್ಯ ಹಕ್ಕನ್ನು ಪಾಕಿಸ್ತಾನಕ್ಕೆ ನೀಡಲಾಗಿತ್ತು. ಆದರೆ ಭದ್ರತೆಯ ಕಾರಣದಿಂದ ಪಾಕಿಸ್ತಾನಕ್ಕೆ ತೆರಳಲು ಬಿಸಿಸಿಐ ನಿರಾಕರಿಸಿತ್ತು. ಇದಕ್ಕೆ ಪರಿಹಾರ ಕಂಡುಕೊಂಡಿರುವ ICC ಭಾರತ ತಂಡದ ಪಂದ್ಯಗಳನ್ನು ಪಾಕಿಸ್ತಾನದ ಬದಲಿಗೆ ತಟಸ್ಥ ಸ್ಥಳದಲ್ಲಿ ಆಡಲಾಗುವುದು ಎಂದು ಇಂದು ಘೋಷಿಸಿದೆ.ಇದಲ್ಲದೆ 2027ರವರೆಗೆ ನಡೆಯುವ ಎಲ್ಲಾ ಐಸಿಸಿ ಪಂದ್ಯಾವಳಿಗಳಲ್ಲಿ ಈ ಹೈಬ್ರಿಡ್ ಮಾದರಿ ಅನ್ವಯವಾಗಲಿದೆ. ದುಬೈನಲ್ಲಿ ಭಾರತದ ಪಂದ್ಯಗಳು ನಡೆಯಲಿವೆ ಎಂಬುದು ಉನ್ನತ ಮೂಲಗಳಿಂದ ತಿಳಿದುಬಂದಿದೆ.

ಈ ಕುರಿತು ಐಸಿಸಿಯಿಂದ ಮೌಖಿಕವಾಗಿ ತಿಳಿಸಲಾಗಿದೆ. ಈ ನಿಟ್ಟಿನಲ್ಲಿ ಅಧಿಕೃತ ದೃಢೀಕರಣಕ್ಕಾಗಿ ಕಾಯಲಾಗುತ್ತಿದೆ. ಭಾರತ ತಂಡ ನಾಕೌಟ್ ಹಂತಕ್ಕೆ ಬಂದರೆ ಆ ಪಂದ್ಯ ಸೇರಿದಂತೆ ಎಲ್ಲಾ ಪಂದ್ಯಗಳನ್ನು ದುಬೈ ಆಯೋಜಿಸಲು ಸಜ್ಜಾಗಿದೆ. ICC ಅಂತಿಮವಾಗಿ ಬಿಕ್ಕಟ್ಟನ್ನು ಕೊನೆಗೊಳಿಸಿದ್ದು, PCB ತಟಸ್ಥ ಸ್ಥಳ ಪರಿಕಲ್ಪನೆಯನ್ನು ಪ್ರಸ್ತಾಪಿಸಿದೆ ಎಂದು ಮೂಲಗಳು ತಿಳಿಸಿವೆ.

2024ರಿಂದ 2027ರವರೆಗಿನ ಭಾರತ ಮತ್ತು ಪಾಕಿಸ್ತಾನ ನಡುವಿನ ಐಸಿಸಿ ಪಂದ್ಯಗಳನ್ನು ತಟಸ್ಥ ಸ್ಥಳದಲ್ಲಿ ಆಯೋಜಿಸಲು ಐಸಿಸಿ ಮಂಡಳಿ ಅನುಮೋದನೆ ನೀಡಿದೆ. ಪಾಕಿಸ್ತಾನದಲ್ಲಿ 2025ರಲ್ಲಿ ನಡೆಯಲಿರುವ ಐಸಿಸಿ ಪುರುಷರ ಚಾಂಪಿಯನ್ಸ್ ಟ್ರೋಫಿ, 2025ರಲ್ಲಿ ಭಾರತದಲ್ಲಿ ನಡೆಯಲಿರುವ ಐಸಿಸಿ ಮಹಿಳೆಯರ ಕ್ರಿಕೆಟ್ ವಿಶ್ವಕಪ್ ಮತ್ತು 2026ರಲ್ಲಿ ಭಾರತ ಮತ್ತು ಶ್ರೀಲಂಕಾ ಅತಿಥ್ಯದಲ್ಲಿ ನಡೆಯಲಿರುವ ICC ಪುರುಷರ ಟಿ-20 ವಿಶ್ವಕಪ್ ಪಂದ್ಯಗಳು ತಟಸ್ಥ ಸ್ಥಳಗಳಲ್ಲಿ ನಡೆಯಲಿದೆ ಎಂದು ಐಸಿಸಿ ಹೇಳಿಕೆಯಲ್ಲಿ ತಿಳಿಸಿದೆ.

ಮುಂದಿನ ವರ್ಷದ ಫೆಬ್ರವರಿ-ಮಾರ್ಚ್ ತಿಂಗಳಲ್ಲಿ ಚಾಂಪಿಯನ್ ಟ್ರೋಫಿ ನಡೆಯಲಿದೆ. ಪಂದ್ಯಗಳ ವೇಳಾಪಟ್ಟಿಯನ್ನು ಶೀಘ್ರದಲ್ಲಿಯೇ ಬಿಡುಗಡೆ ಮಾಡಲಾಗುವುದು ಎಂದು ಐಸಿಸಿ ಹೇಳಿದೆ. ಪಾಕಿಸ್ತಾನದ ಅತಿಥ್ಯದಲ್ಲಿ ನಡೆಯಲಿರುವ 2028ರ ಐಸಿಸಿ ಮಹಿಳೆಯರ ಟಿ-20 ವಿಶ್ವಕಪ್ ಕೂಡಾ ತಟಸ್ಥ ತಳದಲ್ಲಿ ನಡೆದಿದೆ. 2029 ರಿಂದ 2031ರವರೆಗಿನ ಹಿರಿಯ ಐಸಿಸಿ ಮಹಿಳೆಯರ ತಂಡಗಳ ಅತಿಥ್ಯವನ್ನು ಕ್ರಿಕೆಟ್ ಆಸ್ಟ್ರೇಲಿಯಾ ವಹಿಸಲಿದೆ ಎಂದು ICC ತಿಳಿಸಿದೆ.

kiniudupi@rediffmail.com

No Comments

Leave A Comment