ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಚಿತ್ರದುರ್ಗದ ಗುಯಿಲಾಳ್ ಬಳಿ ಬೆಂಕಿಗೆ ಹೊತ್ತಿ ಉರಿದ ಖಾಸಗಿ ಬಸ್: ಪ್ರಯಾಣಿಕರು ಪಾರು
ಹಿರಿಯೂರು(ಚಿತ್ರದುರ್ಗ): ಟಯರ್ ಸ್ಫೋಟಗೊಂಡು ಖಾಸಗಿ ಬಸ್ ಗೆ ಬೆಂಕಿ ತಗುಲಿ ರಸ್ತೆ ಮಧ್ಯೆಯೇ ಧಗಧಗನೆ ಹೊತ್ತಿ ಉರಿದ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ಗುಯಿಲಾಳ್ ಟೋಲ್ ಬಳಿ ಶನಿವಾರ ಬೆಳಗ್ಗೆ ಸಂಭವಿಸಿದೆ.
ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಇಂದು ಬೆಳಗ್ಗೆ ದುರ್ಘಟನೆ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಟಯರ್ ಸ್ಫೋಟಗೊಂಡ ಕೂಡಲೇ ಟೋಲ್ ಬಳಿ ಚಲಿಸುತ್ತಿದ್ದ ಬಸ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ಎಚ್ಚೆತ್ತ ನಿರ್ವಾಹಕ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ಇದರಿಂದ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿ ಪಾರಾಗಿದ್ದಾರೆ.
ಖಾಸಗಿ ಬಸ್ಸು ದಾವಣಗೆರೆಯಿಂದ ಬೆಂಗಳೂರು ಕಡೆಗೆ ಸಂಚರಿಸುತ್ತಿತ್ತು. ಬಸ್ ನಲ್ಲಿ ಸುಮಾರು 30ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಸುದ್ದಿ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಐಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.