ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ತ್ರಾಸಿ: ಟೂರಿಸ್ಟ್ ಬೋಟ್ ಮಗುಚಿ ರೈಡರ್ ನಾಪತ್ತೆ; ಪ್ರವಾಸಿಗನ ರಕ್ಷಣೆ

ಕುಂದಾಪುರ: ಪ್ರವಾಸಿಗನನ್ನು ಕರೆದೊಯ್ಯತಿದ್ದ ಜೆಟ್‌ಸ್ಕೀ ಬೋಟ್ ಮಗುಚಿದ ಪರಿಣಾಮ ಇಬ್ಬರು ಸಮುದ್ರಕ್ಕೆ ಬಿದ್ದು, ಜೆಟ್ ಸ್ಕೀ ರೈಡರ್ ನಾಪತ್ತೆಯಾದ ಘಟನೆ ಇಲ್ಲಿನ ತ್ರಾಸಿ ಕಡಲಕಿನಾರೆಯಲ್ಲಿ ಶನಿವಾರ ಸಂಜೆ ಸಂಭವಿಸಿದೆ.

ಜೆಟ್ ಸ್ಕೀ ರೈಡರ್ ರೋಹಿದಾಸ್ ಅಲಿಯಾಸ್ ರವಿ (45) ನಾಪತ್ತೆಯಾಗಿದ್ದು, ಬೆಂಗಳೂರಿನ ಪ್ರವಾಸಿಗನನ್ನು ರಕ್ಷಿಸಲಾಗಿದೆ.

ತ್ರಾಸಿ ಕಡಲ ಕಿನಾರೆಯಲ್ಲಿ ಕಾರ್ಯಾಚರಿಸುತ್ತಿರುವ ಬೆಳುಗಾ ವಾಟರ್ ಸ್ಪೋರ್ಟ್ಸ್‌ನ ಜೆಟ್‌ಸ್ಕೀ ಬೋಟ್‌ನಲ್ಲಿ ಓರ್ವ ಪ್ರವಾಸಿಗನನ್ನು ಕೂರಿಸಿಕೊಂಡು ಸಮುದ್ರದಲ್ಲಿ ವಿಹಾರ ನಡೆಸಲಾಗುತ್ತಿತ್ತು. ಈ ವೇಳೆ ರೈಡರ್ ನಿಯಂತ್ರಣ ತಪ್ಪಿ ಜೆಟ್‌ಸ್ಕೀ ಮಗುಚಿ ಬಿದ್ದಿತ್ತು. ರೈಡ್‌ಗೂ ಮೊದಲು ಪ್ರವಾಸಿಗರಿಗೆ ಲೈಫ್ ಜಾಕೆಟ್ ಹಾಕಿ ಸುರಕ್ಷತಾ ಕ್ರಮ ವಹಿಸಿದ್ದರಿಂದ ಆತನನ್ನು ರಕ್ಷಿಸಲಾಗಿದೆ.

No Comments

Leave A Comment