ಉಡುಪಿ ನಗರದ ಕೆ.ಎ೦.ಮಾರ್ಗದಲ್ಲಿನ ಶ್ರೀಭಗವಾನ್ ನಿತ್ಯಾನ೦ದ ಮ೦ದಿರ-ಮಠದಲ್ಲಿ ಜುಲಾಯಿ 10ರ ಗುರುವಾರದ೦ದು ಶ್ರೀಗುರು ಪೂರ್ಣಿಮಾ ಮಹೋತ್ಸವವು ಜರಗಲಿದೆ...
ಟರ್ಕಿಯ ಸ್ಫೋಟಕ ವಸ್ತುಗಳ ಘಟಕದಲ್ಲಿ ಭಾರೀ ಸ್ಫೋಟ; 12 ಮಂದಿ ಸಾವು
ಇಸ್ತಾಂಬುಲ್: ವಾಯುವ್ಯ ಟರ್ಕಿಯಲ್ಲಿ ಮಂಗಳವಾರ ಸ್ಫೋಟಕ ವಸ್ತುಗಳ ಘಟಕದಲ್ಲಿ ಪ್ರಬಲ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ 12 ಜನ ಸಾವನ್ನಪ್ಪಿದ್ದಾರೆ ಮತ್ತು ಐವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಾಥಮಿಕ ವರದಿಗಳ ಪ್ರಕಾರ, ಬಲಿಕೇಸಿರ್ ಪ್ರಾಂತ್ಯದ ಕರೇಸಿ ಜಿಲ್ಲೆಯ ಸ್ಫೋಟಕ ವಸ್ತುಗಳ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ 12 ಉದ್ಯೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಐವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸ್ಥಳೀಯ ಗವರ್ನರ್ ಇಸ್ಮಾಯಿಲ್ ಉಸ್ತಾವೊಗ್ಲು ಅವರು ಹೇಳಿದ್ದಾರೆ.
ಕಾರ್ಖಾನೆಯೊಳಗೆ ಯಾವುದೇ ಸಿಬ್ಬಂದಿ ಉಳಿದಿಲ್ಲ ಮತ್ತು ಬೆಂಕಿಯನ್ನು ನಂದಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಸ್ಥಾವರದ ಒಂದು ವಿಭಾಗದಲ್ಲಿ ಬೆಳಗ್ಗೆ 8:25 ಕ್ಕೆ(0525 GMT) ಸ್ಫೋಟ ಸಂಭವಿಸಿದೆ. ವಸತಿ ಪ್ರದೇಶಗಳಿಂದ ದೂರದಲ್ಲಿರುವ ಈ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಆಂತರಿಕ ಸಚಿವ ಅಲಿ ಯರ್ಲಿಕಾಯಾ ಅವರು ಹೇಳಿದ್ದಾರೆ.
ಸ್ಫೋಟಕ್ಕೆ ಕಾರಣವೇನು ಎಂಬುದನ್ನು ಪತ್ತೆ ಹಚ್ಚಲು ಪ್ರಯತ್ನಿಸುತ್ತಿದ್ದೇವೆ ಎಂದು ಅವರು ತಿಳಿಸಿದ್ದಾರೆ.