ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಬೆಳಗಾವಿಯಲ್ಲಿ ಮತ್ತೋರ್ವ ಬಾಣಂತಿ ಸಾವು: ತರಾತುರಿಯಲ್ಲಿ ಮೃತದೇಹ ಕೊಟ್ಟು ಕಳಿಸಿದ ವೈದ್ಯರು

ಬೆಳಗಾವಿ, ಡಿಸೆಂಬರ್​ 26: ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸಾವು  ಮುಂದುವರೆದಿದೆ. ಇತ್ತೀಚೆಗೆ ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವು ಪ್ರಕರಣ ಬೆಳಕಿಗೆ ಬಂದಿತ್ತು. ಇದೀಗ ಮತ್ತೋರ್ವ ಬಾಣಂತಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಜಿಲ್ಲೆಯ ಗೋಕಾಕ್ ತಾಲೂಕಿನ ಕುಂದರಗಿ ಗ್ರಾಮದ ಪೂಜಾ ಅಡಿವೆಪ್ಪ ಖಡಕಬಾವಿ(25) ಮೃತ ಬಾಣಂತಿ. ಮಗಳ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಡಿ.24ರಂದು ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ಪೂಜಾ ದಾಖಲಾಗಿದ್ದರು. ನಿನ್ನೆ ಮಧ್ಯಾಹ್ನ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಬಳಿಕ ಫಿಟ್ಸ್​​​ ಬಂದು ಮೃತಪಟ್ಟಿರುವುದಾಗಿ ಪೂಜಾ ಸಂಬಂಧಿಕರಿಗೆ ಆಸ್ಪತ್ರೆ ವೈದ್ಯರು ಹೇಳಿದ್ದಾರೆ. ಬಳಿಕ ಪೋಸ್ಟ್​​ಮಾರ್ಟಮ್ ನಡೆಸದೇ ತರಾತುರಿಯಲ್ಲಿ ಬಾಣಂತಿ ಶವಕೊಟ್ಟು ವೈದ್ಯರು ಕಳಿಸಿದ್ದಾರೆ ಎನ್ನಲಾಗಿದೆ.

ಇದರಲ್ಲಿ ನಮ್ಮದು ಯಾವುದೇ ನಿರ್ಲಕ್ಷ್ಯ ಇಲ್ಲ: ವೈದ್ಯ ವಸಂತ್ ಕಬ್ಬೂರ 

ಈ ಬಗ್ಗೆ ಬಿಮ್ಸ್ ಆಸ್ಪತ್ರೆಯ ಹೆರಿಗೆ ವೈದ್ಯ ವಸಂತ್ ಕಬ್ಬೂರ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಡಿ.24ರಂದು ಪೂಜಾ ಎಂಬುವರು ಆಸ್ಪತ್ರೆಗೆ ದಾಖಲಾಗಿದ್ದರು. ಪೂಜಾಗೆ 3 ಮಕ್ಕಳಾಗಿದ್ವು, ಒಂದು ಆಪರೇಷನ್ ಆಗಿತ್ತು. ಬಿಮ್ಸ್​​ ಆಸ್ಪತ್ರೆಗೆ ಬಂದಾಗಲೇ ಪೂಜಾಗೆ ಪ್ರಜ್ಞೆ ಇರಲಿಲ್ಲ. ಕೂಡಲೇ ಅವರನ್ನು ನಾವು ಐಸಿಯುಗೆ ಶಿಫ್ಟ್​ ಮಾಡಿದ್ದೆವು ಎಂದಿದ್ದಾರೆ.

ಪರೀಕ್ಷಿಸಿದ ಬಳಿಕ ಹೃದಯ ವೀಕ್ ಇದೆ ಎಂದು ಹೇಳಿದ್ವಿ. ಪೂಜಾಗೆ ಹೆರಿಗೆಯಾದ ಮೇಲೆ ಹೃದಯ ದೊಡ್ಡದಾಗಿತ್ತು. ಹೃದಯ ಪಂಪಿಂಗ್ ಆಗದೇ ಇಂದು ಪೂಜಾ ಮೃತಪಟ್ಟಿದ್ದಾರೆ. ಮಗು 1.6 ಕೆಜಿ ಇದೆ, ಅದಕ್ಕೂ ಐಸಿಯುನಲ್ಲಿ ಚಿಕಿತ್ಸೆ ಕೊಡುತ್ತಿದ್ದೇವೆ. ಇದರಲ್ಲಿ ನಮ್ಮದು ಯಾವುದೇ ನಿರ್ಲಕ್ಷ್ಯ ಇಲ್ಲ ಎಂದು ಹೇಳಿದ್ದಾರೆ.

ವೈದ್ಯರ ನಿರ್ಲಕ್ಷ್ಯ: ಬಾಣಂತಿ ಸಾವು

ಇನ್ನು ಇತ್ತೀಚೆಗೆ ವೈದ್ಯರ ನಿರ್ಲಕ್ಷ್ಯಕ್ಕೆ ಇದೇ ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯೊಬ್ಬರು ಮೃತಪಟ್ಟಿದ್ದರು. ಜಿಲ್ಲೆಯ ಹುಕ್ಕೇರಿ ತಾಲೂಕಿನ ಗೌಡವಾಡ ಗ್ರಾಮದಲ್ಲಿ ನಿವಾಸಿ ವೈಶಾಲಿ ಕೊಟಬಾಗಿ (20) ಮೃತ ಪಟ್ಟ ಬಾಣಂತಿ.

ವೈಶಾಲಿಗೆ ಕಳೆದ ಮೂರು ದಿನಗಳ ಹಿಂದೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಆಗ ತಕ್ಷಣವೇ ಹುಕ್ಕೇರಿ ತಾಲೂಕು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆದರೆ ವೈದ್ಯರು ಇಲ್ಲದ ಕಾರಣಕ್ಕೆ ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಬಿಮ್ಸ್ ಆಸ್ಪತ್ರೆ ಹೆರಿಗೆ ವಾರ್ಡ್​ನಲ್ಲಿ ದಾಖಲಾದ ವೈಶಾಲಿಗೆ ಬೆಳಗ್ಗೆಯೇ ಹೆರಿಗೆ ಆಗಿದೆ. ಹೆಣ್ಣು ಮಗುವಿಗೆ ಜನ್ಮಕೊಟ್ಟ ವೈಶಾಲಿ ಆರೋಗ್ಯವಾಗಿ ಇದ್ದರು.

ಇಡೀ ದಿನ ಕುಟುಂಬಸ್ಥರು ಭೇಟಿಯಾಗಿ ಆರೋಗ್ಯ ವಿಚಾರಿಸಿ ಖುಷಿಯಿಂದ ವಾಪಾಸ್ ಆಗಿದ್ದರು. ಆದರೆ ಬೆಳಗ್ಗೆಯಿಂದಲೇ ವೈಶಾಲಿಗೆ ಎದೆನೋವು ಕಾಣಿಸಿಕೊಂಡಿತ್ತು. ವೈದ್ಯರು ವೈಶಾಲಿಯನ್ನ ತೀವ್ರ ನಿಗಾ ಘಟಕಕ್ಕೆ ಶಿಫ್ಟ್ ಮಾಡಿದ್ದಾರೆ. ಆದರೆ ಚಿಕಿತ್ಸೆ ಫಲಿಸದೇ ವೈಶಾಲಿ ಮೃತಪಟ್ಟಿದ್ದರು.

kiniudupi@rediffmail.com

No Comments

Leave A Comment