ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ
ಮಂಗಳೂರು: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ ಹಿನ್ನೆಲೆ ಬೀಚ್ ಉತ್ಸವ ಮುಂದೂಡಿಕೆ
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನಲೆ ಡಿಸೆಂಬರ್ 28 ಮತ್ತು 29ರಂದು ತಣ್ಣೀರುಭಾವಿ ಬೀಚ್‌ನಲ್ಲಿ ಆಯೋಜಿಸಲಾಗಿದ್ದ ಬೀಚ್ ಉತ್ಸವವನ್ನು ದ.ಕ ಜಿಲ್ಲಾಡಳಿತ ಮುಂದೂಡಿ ಪ್ರಕಟನೆ ಹೊರಡಿಸಿದೆ.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಏಳು ದಿನಗಳ ಶೋಕಾಚರಣೆ ಘೋಷಿಸಿದೆ. ಇದೀಗ ಬೀಚ್ ಉತ್ಸವವನ್ನು ಮುಂದೂಡಲಾಗಿದ್ದು, ಪರಿಷ್ಕೃತ ದಿನಾಂಕಗಳನ್ನು ಜಿಲ್ಲಾಡಳಿತ ಶೀಘ್ರದಲ್ಲೇ ಪ್ರಕಟಿಸಲಿದೆ ಎಂದು ತಿಳಿದುಬಂದಿದೆ.