ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ....ಚಿತ್ತಾಪುರದಲ್ಲಿ RSS ಪಥ ಸಂಚಲನ: ವಿವಿಧ ಸಂಘಟನೆಗಳಿಗೆ ಪ್ರತ್ಯೇಕ ದಿನಾಂಕ ನಿಗದಿಪಡಿಸುವಂತೆ ಹೈಕೋರ್ಟ್ ಆದೇಶ

ಉಪ್ಪಿನಂಗಡಿ : ಸ್ವೀಟ್ಸ್ ಮಳಿಗೆ ಬೆಂಕಿಗಾಹುತಿ – ಲಕ್ಷಾಂತರ ರೂಪಾಯಿ ನಷ್ಟ

ಆಕಸ್ಮಿಕವಾಗಿ ಸ್ವೀಟ್ಸ್ ಮಳಿಗೆಗೆ ಬೆಂಕಿ ಹತ್ತಿಕೊಂಡು ಲಕ್ಷಾಂತರ ರೂ. ನಷ್ಟವಾದ ಘಟನೆ ಉಪ್ಪಿನಂಗಡಿ ಬಸ್ ನಿಲ್ದಾಣದ ಬಳಿಯ ಸಮತಾ ಸ್ವೀಟ್ಸ್ ಮಳಿಗೆಯಲ್ಲಿ ಸಂಭವಿಸಿದೆ.

ಮಳಿಗೆ ಸಂಪೂರ್ಣ ಬೆಂಕಿಗಾಹುತಿಯಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮಳಿಗೆಯ ಮಾಲಕರು ಬಂದ್ ಮಾಡಿ ಮನೆಗೆ ತೆರಳಿದ್ದ ವೇಳೆ ಈ ಅವಘಡ ಸಂಭವಿಸಿದೆ. ತಡರಾತ್ರಿ ಮಳಿಗೆಯಿಂದ ಹೊಗೆ ಬರುತ್ತಿದ್ದುದನ್ನು ಗಮನಿಸಿದ ಸ್ಥಳೀಯರು ಮಾಲಕರಿಗೆ ಮಾಹಿತಿ ತಿಳಿಸಿದ್ದಾರೆ.

ಕೂಡಲೇ ಮಾಲಕರು ಬಂದು ಬಾಗಿಲು ತೆಗೆದಾಗ ಬೆಂಕಿ ಹೊತ್ತಿಕೊಂಡು ಮಳಿಗೆ ಸಂಪೂರ್ಣ ಭಸ್ಮವಾಗಿ ಹೋಗಿತ್ತು. ಸಾರ್ವಜನಿಕರು ಬೆಂಕಿ ನಂದಿಸಲು ಹರಸಾಹಸಪಟ್ಟರು, ಬಳಿಕ ಬೆಳ್ತಂಗಡಿ ಹಾಗೂ ಪುತ್ತೂರಿನಿಂದ ಬಂದ ಅಗ್ನಿಶಾಮಕ ವಾಹನಗಳು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಮಳಿಗೆಯಲ್ಲಿದ್ದ ಫ್ರಿಡ್ಜ್ , ಕಪಾಟುಗಳು, ಸಿಹಿತಿಂಡಿಗಳು ಸಂಪೂರ್ಣ ಬೆಂಕಿಗಾಹುತಿಯಾಗಿದ್ದು, ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿವೆ ಎಂದು ಹೇಳಲಾಗಿದೆ.

No Comments

Leave A Comment