ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಉಡುಪಿ: ಅಂಬಲಪಾಡಿಯಲ್ಲಿ ಮೇಲ್ಸೇತುವೆ ನಿರ್ಮಾಣ ಸ್ಥಳದಿಂದ ಪಿಲ್ಲರ್ ಅಗೆತದ ಗುಂಡಿಗೆ ಕಾರು ಪಲ್ಟಿ

ಉಡುಪಿ:ಮೇಲ್ಸೇತುವೆ ಪಿಲ್ಲರ್‌ನ ಅಡಿಪಾಯಕ್ಕಾಗಿ ಅಗೆದಿದ್ದ ಬೃಹತ್ ಗುಂಡಿಗೆ ಕಾರೊಂದು ಪಲ್ಟಿಯಾದ ಘಟನೆ ಅಂಬಲಪಾಡಿ ಜಂಕ್ಷನ್‌ನಲ್ಲಿ ನಡೆದಿದೆ.

ಮಂಗಳೂರಿನಿಂದ ಕುಂದಾಪುರ ಕಡೆಗೆ ತೆರಳುತ್ತಿದ್ದ ಕಾರು ಮತ್ತೊಂದು ವಾಹನಕ್ಕೆ ದಾರಿ ಮಾಡಿಕೊಡುವ ವೇಳೆ ನಿಯಂತ್ರಣ ತಪ್ಪಿ ಬೃಹತ್ ಗುಂಡಿಗೆ ಬಿದ್ದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಅಂಬಲಪಾಡಿ ಜಂಕ್ಷನ್‌ನಲ್ಲಿ ಸಂಚಾರ ದಟ್ಟಣೆಯನ್ನು ನಿವಾರಿಸುವ ಉದ್ದೇಶದಿಂದ ಮೇಲ್ಸೇತುವೆ ನಿರ್ಮಾಣ ಮಾಡಲಾಗುತ್ತಿದೆ. ಮೇಲ್ಸೇತುವೆ ನಿರ್ಮಾಣವಾಗುತ್ತಿರುವ ಸ್ಥಳದ ಸುತ್ತಲೂ ಸಾಕಷ್ಟು ಬ್ಯಾರಿಕೇಡ್‌ಗಳು ಮತ್ತು ಎಚ್ಚರಿಕೆ ಫಲಕಗಳಿಲ್ಲದಿರುವುದು ಈ ಅಪಘಾತಕ್ಕೆ ಕಾರಣವಾಗಿದೆ. ಸ್ಥಳದಲ್ಲಿ ಸುರಕ್ಷತಾ ಕ್ರಮಗಳು ಇಲ್ಲದಿರುವ ಕಾರಣ ಜನರು ಕಳವಳ ವ್ಯಕ್ತಪಡಿಸಿದ್ದಾರೆ. ಇನ್ನು ಅಪಘಾತಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

No Comments

Leave A Comment