ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಲೈಂಗಿಕ ದೌರ್ಜನ್ಯ ಪ್ರಕರಣ ವಿರುದ್ಧ ಪ್ರತಿಭಟನೆ – ಮೈಗೆ ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ
ಚೆನ್ನೈ:ಡಿ.27ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷ ಕೆ.ಅಣ್ಣಮಲೈ ಭೀಷ್ಮ ಶಪತ ಕೈಗೊಂಡಿದ್ದು. ಅಣ್ಣಾಮಲೈ ಚಾಟಿಯಿಂದ ತಮಗೆ ಹೊಡೆದುಕೊಳ್ಳುವ ಮೂಲಕ ಹೆಣ್ಣುಮಕ್ಕಳ ಲೈಂಗಿಕ ದೌರ್ಜನ್ಯ ವಿರುದ್ಧ ಪ್ರತಿಭಟಿಸಿದ್ದಾರೆ. ಇಂದು ಬೆಳಗ್ಗೆ ಅವರ ನಿವಾಸದ ಮುಂದೆ ಚಾಟಿಯಿಂದ ಹೊಡೆದುಕೊಂಡು ತಮಗೆ ತಾವೇ ನೋವು ಮಾಡಿಕೊಂಡಿದ್ದಾರೆ.
ಗುರುವಾರ ಪತ್ರಿಕಾಗೋಷ್ಠಿಯಲ್ಲಿ, ಅಣ್ಣಾಮಲೈ ಅವರು ತಮ್ಮ ಶೂಗಳನ್ನು ತೆಗೆದು ಆರು ಬಾರಿ ಚಾಟಿ ಬೀಸುವುದಾಗಿ ಘೋಷಿಸಿದರು, 48 ದಿನಗಳ ಕಾಲ ಉಪವಾಸ ಮಾಡುವುದಾಗಿ ಮತ್ತು ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸರ್ಕಾರವನ್ನು ಅಧಿಕಾರದಿಂದ ತೆಗೆದುಹಾಕುವವರೆಗೆ ಪಾದರಕ್ಷೆಗಳನ್ನು ಧರಿಸುವುದಿಲ್ಲ ಎಂದು ಘೋಷಿಸಿದ್ದರು.
ಇತ್ತೀಚಿನ ಅಣ್ಣಾ ವಿಶ್ವವಿದ್ಯಾನಿಲಯದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ಪ್ರತಿಕ್ರಿಯೆಯ ಬಗ್ಗೆ ಸಾರ್ವಜನಿಕ ಆಕ್ರೋಶ ಹೆಚ್ಚುತ್ತಿರುವ ನಡುವೆ ಅಣ್ಣಾಮಲೈ ಪ್ರತಿಭಟನೆಗೆ ಮುಂದಾಗಿದ್ದಾರೆ. ಅವರ ಈ ನಡೆ ರಾಜಕೀಯ ಮತ್ತು ಸಾರ್ವಜನಿಕ ವೇದಿಕೆಗಳಲ್ಲಿ ಬೆಂಬಲ ಮತ್ತು ಚರ್ಚೆ ಎರಡನ್ನೂ ಹುಟ್ಟುಹಾಕಿದೆ.